
ಕಲಬುರಗಿ,ನ.15- ಕಲಬುರಗಿಯಲ್ಲಿ ಕ್ರೀಡಾ ಪ್ರತಿಭೆಗಳು ಕಡಿಮೆ ಇಲ್ಲ, ಆದರೆ ಅವರಿಗೆ ಸೂಕ್ತ ವೇದಿಕೆ ಇರಲಿಲ್ಲ. ಇದೀಗ ಅವರಿಗೆ ಅವಕಾಶ ಕಲ್ಪಿಸುವ ಮೂಲಕ ಕಲಬುರಗಿಯಲ್ಲಿ ಕ್ರೀಡಾ ಕ್ರಾಂತಿಗೆ ಮುನ್ನುಡಿ ಬರೆಯಲಾಗಿದೆ ಎಂದು ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಶನಿವಾರ ಕಲಬುರಗಿ ನೆಕ್ಷ್ಟ್ ಪೌಂಡೇಷನ್ ಪ್ರಾಯೋಜಕತ್ವದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಪ್ರೆನ್ಜೋ ಸಂಸ್ಥೆ ಆಯೋಜಿಸಿದ ಕಲಬುರಗಿ ಸ್ಪೋಟ್ರ್ಸ್ ಹಬ್ಬ ಸಮಾರೋಪ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಯಲ್ಲಿ ವಿಜೇತ ಕ್ರೀಡಾಪಟುಗಳು ಮತ್ತು ತಂಡಗಳಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಕ್ರೀಡಾಪಟುಗಳಿಗಾಗಿ ಆಯೋಜಿಸಲಾಗಿದ್ದ ‘ಕಲಬುರಗಿ ಸ್ಪೋಟ್ರ್ಸ್ ಹಬ್ಬ’ ಯಶಸ್ವಿಯಾಗಿ ಮುಕ್ತಾಯವಾಗಿದೆ. ವರತ್ತಿಪರರಿಂದ ಮತ್ತು ಸ್ಥಳೀಯ ಕ್ರೀಡಾ ಅಸೋಸಿಯೇಷನ್ ಅವರ ಸಹಯೋಗದೊಂದಿಗೆ ಆಯೋಜಿಸಿದ ಕ್ರೀಡಾ ಹಬ್ಬದಲ್ಲಿ ಭಾಗವಹಿಸಿದವರು ಕೇವಲ ಪ್ರಶಸ್ತಿಗಳನ್ನು ಮಾತ್ರ ಪಡೆದಿಲ್ಲ; ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ಆತ್ಮಸ್ಥೈರ್ಯವನ್ನೂ ಹೆಚ್ಚಿಸಿಕೊಂಡಿದ್ದಾರೆ ಎಂದರು.
ಇಂದಿನ ಕ್ರೀಡಾ ಹಬ್ಬ ಮುಕ್ತಾಯದ ಗೆರೆ ಅಲ್ಲ; ಇದು ಕ್ರೀಡಾ ಬೆಳವಣಿಗೆಯ ಆರಂಭದ ಗೆರೆ. ಪ್ರಶಸ್ತಿ ಪಡೆದ ಎಲ್ಲ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಪ್ರತಿಭೆಗಳಿಗೆ ನಿರಂತರ ಪೆÇ್ರೀತ್ಸಾಹ ನೀಡುವ ಮೂಲಕ ಕಲಬುರಗಿಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಬೆಂಬಲಿಸಲಾಗುವುದು. ಇನ್ಮುಂದೆ ಪ್ರತಿ ವರ್ಷ ಒಂದು ತಿಂಗಳನ್ನು ಕ್ರೀಡಾ ಹಬ್ಬಕ್ಕೆ ಮೀಸಲಿಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇದರಿಂದ ಕ್ರೀಡಾಪಟುಗಳಿಗೆ ಕ್ರೀಡಾಕೂಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಲು ತರಬೇತಿ ಪಟೆಯಲು ಅನುಕೂಲವಾಗಲಿದೆ ಎಂದರು.
10 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಕ್ರೀಡಾ ಸಂಕೀರ್ಣ
ಕಲಬುರಗಿ ಜಿಲ್ಲಾ ಕ್ರೀಡಾಂಗಣ 50 ಕೋಟಿ ವೆಚ್ಚದಲ್ಲಿ ನವೀಕರಣ ಕಾರ್ಯ ನಡೆಯುತ್ತಿದೆ. ಇದಲ್ಲದೆ ಕೆ.ಕೆ.ಆರ್.ಡಿ.ಬಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ 10 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ನಗರದ ಐದು ಕಡೆ ಸಮುದಾಯ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಫುಟಬಾಲ್ಕ್ರೀಡಾಂಗಣ ನಿರ್ಮಿಸಿದ್ದೇವೆ. ???ತ್ಯೆಕ ಮಹಿಳಾ ಕ್ರೀಡಾಂಗಣ ಕಾಮಗಾರಿ ಪ್ರಗತಿಯಲ್ಲಿದೆ. ಚಿತ್ತಾಪುರದಲ್ಲಿಯೂ ಹೊಸ ಕ್ರೀಡಾಂಗಣ ನಿರ್ಮಿಸಲಾಗಿದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಸರ್ಕಾರದ ಅವಧಿಯಲ್ಲಿ ಕ್ರೀಡಾ ಅಸೋಸಿಯೇಷನ್ ಗಳ ಎಲ್ಲಾ ಬೇಡಿಕೆಯನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಎಂ.ಎಲ್.ಸಿ. ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡಾಪಟುಗಳಲ್ಲಿ ಕ್ರೀಡಾಸಕ್ತಿ ಹೆಚ್ಚಿಸಲು ಸ್ಪೋಟ್ರ್ಸ್ ಹಬ್ಬ ಸಹಕಾರಿಯಾಗಿದೆ. ಹಿಂದೆ ಯಾವತ್ತು ಈ ರೀತಿಯ ಕ್ರೀಡಾ ಹಬ್ಬ ಜಿಲ್ಲೆಯಲ್ಲಿ ಅಗಿರಲಿಲ್ಲ. ಐ.ಟಿ-ಬಿ.ಟಿ ಸಚಿವರಾಗಿಯೂ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಗಮನಾರ್ಹ ಸಾಧನೆ ಮಾಡಿ ಇಡೀ ವಿಶ್ವ ನಾಯಕರು ಕರುನಾಡಿನತ್ತ ನೋಡುವಂತಾಗಿದೆ. ಯುವಜನರ ಭವಿಷ್ಯದ ದೃಷ್ಠಿಯಿಂದ ಕಲಬುರಗಿ ನೆಕ್ಸ್ಟ್ ಫೌಂಡೇಷನ್ ಸಹಯೋಗದಿಂದ ಕ್ರೀಡೆ ಆಯೋಜಿಸಿದು ತುಂಬಾ ಸಾರ್ಥವಾಗಿದ್ದು, ಜಿಲ್ಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಮ್ಮಿಕೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾಗಿದೆ ಎಂದರು.
ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೊಡುಗೆ ಅಪಾರವಿದೆ. 30 ಕೋಟಿ ರೂ. ಮೊತ್ತದಲ್ಲಿ ಮಹಿಳಾ ಕ್ರೀಡಾಂಗಣ ಕಾರ್ಯ ಅಂತಿಮ ಹಂತದಲ್ಲಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಉತ್ತೇಜನದಿಂದ ಕಲಬುರಗಿ ರೊಟ್ಟಿ ಕುರಿತು ಇಂದು ಪ್ರಧಾನಮಂತ್ರಿಗಳು ಮನ್ ಕೀ ಬಾತ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಇಲ್ಲಿ ಬೆಳೆಯುವ ತೊಗರಿಗೆ ಉತ್ತಮ ಮಾರುಕಟ್ಡೆ ಕಲ್ಪಿಸಿ ರೈತರ ಆದಾಯ ಹೆಚ್ಚಿಸಲು ಸಹ ಪ್ರಿಯಾಂಕ್ ಖರ್ಗೆ ಅವರು ವಿಶೇಷ ಮುತುವರ್ಜಿ ವಹಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತೀಮಾ, ಎಂ.ವೈ.ಪಾಟಿಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರ ಪಾಲಿಕೆ ಮೇಯರ್ ಅಜಮಲ್ ಗೋಲಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೆÇಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನುವಾಸಲು, ಡಿ.ಸಿ.ಪಿ ಶಾಲೂ, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಪಿ.ಶ್ರವಣಕುಮಾರ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿ.ಸಿ.ಸಿ ಅಧ್ಯಕ್ಷ ಡಾ. ಕಿರಣ ದೇಶಮುಖ ಹಾಗೂ ಸ್ಪ್ರೆನ್ಜೋ ಸಂಸ್ಥೆಯ ಪ್ರವೃತ್ ಇದ್ದರು. ಕಲಬುರಗಿ ಸ್ಪೋಟ್ರ್ಸ್ ಹಬ್ಬ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಸಂಗಮೇಶ ವಂದಿಸಿದ್ದರು.





















