
ಸಂಜೆವಾಣಿ ವಾರ್ತೆ,
ವಿಜಯಪುರ, ಫೆ. ೩: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ದೇಶದ ಬ್ಯಾಂಕಿAಗ್ ವಲಯದ ಹಣಕಾಸಿನ ಸ್ಥಿತಿ ಅತ್ಯಂತ ಗಟ್ಟಿಯಾಗಿದೆ ಎಂದು ಹೇಳಿರುವುದನ್ನು ನಾವು ಸ್ವಾಗತಿಸುತ್ತೇವೆ. ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ, ಬ್ಯಾಂಕ್ ನೌಕರರು ಹೆಚ್ಚಿನ ಶ್ರಮ ಹಾಗೂ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ ಸಾಧಿಸಿದ ಪ್ರಗತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ
ಪ್ರಧಾನ ಕಾರ್ಯದರ್ಶಿ ಜಿ. ಜಿ. ಗಾಂಧಿ ತಿಳಿಸಿದ್ದಾರೆ.
ಭಾರತ ನಿರ್ಮಾಣದ ಉದ್ದೇಶದಿಂದ ಬ್ಯಾಂಕಿAಗ್ ವಲಯಕ್ಕೆ ಸಂಬAಧಿಸಿದAತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿರುವುದನ್ನು ನಾವು ಗಮನಿಸಿದ್ದೇವೆ. ಆದರೆ, ಆ ಸಮಿತಿಯ ಮುಖಾಂತರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಸಗಿ ಬಂಡವಾಳ ಹೂಡಿಕೆ ಮಾಡುವ ಯಾವುದೇ ಪ್ರಯತ್ನ ನಡೆದರೆ, ಅದಕ್ಕೆ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘವು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತದೆ ಎಂದು ಸ್ಪಷ್ಟಪಡಿಸುತ್ತೇವೆ.
ಇನ್ನೂ, ನೌಕರರ ವರ್ಗಕ್ಕೆ ಸಂಬAಧಿಸಿದAತೆ ಆದಾಯ ತೆರಿಗೆ ವಿಷಯದಲ್ಲಿ ಯಾವುದೇ ಅನುಕೂಲಕರ ಬದಲಾವಣೆಗಳನ್ನು ಮಾಡದಿರುವುದು ನಮ್ಮಲ್ಲಿ ತೀವ್ರ ನಿರಾಸೆ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.
























