Home ಜಿಲ್ಲೆ ಎಂ. ಹೊಸಳ್ಳಿ ಗ್ರಾಮದಲ್ಲಿ ಯುಜಿಡಿ ಸಂಸ್ಕರಣಾ ಘಟಕಕ್ಕೆ ವಿರೋಧಸೋಮವಾರ ಡಿಸಿ ಕಚೇರಿ ಎದುರು ಉಗ್ರ ಹೋರಾಟದ...

ಎಂ. ಹೊಸಳ್ಳಿ ಗ್ರಾಮದಲ್ಲಿ ಯುಜಿಡಿ ಸಂಸ್ಕರಣಾ ಘಟಕಕ್ಕೆ ವಿರೋಧಸೋಮವಾರ ಡಿಸಿ ಕಚೇರಿ ಎದುರು ಉಗ್ರ ಹೋರಾಟದ ಎಚ್ಚರಿಕೆ

ಯಾದಗಿರಿ: ತಾಲೂಕಿನ ಎಂ. ಹೊಸಳ್ಳಿ ಗ್ರಾಮದ ಸಮೀಪದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ತ್ಯಾಜ್ಯ ಶುದ್ಧೀಕರಣ (ಯುಜಿಡಿ) ಸಂಸ್ಕರಣಾ ಘಟಕ ಕಾಮಗಾರಿಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಘಟಕವನ್ನು ಜನವಸತಿ ಪ್ರದೇಶದಿಂದ ದೂರದ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವAತೆ ಜಯ ಕರ್ನಾಟಕ ರಕ್ಷಣಾ ಸೇನೆ ಅಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ್ ಆಗ್ರಹಿಸಿದ್ದಾರೆ.

ಶನಿವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಗ್ರಾಮಸ್ಥರೊಂದಿಗೆ ಭೇಟಿ ನೀಡಿ, ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಅವರು, ಗ್ರಾಮದ ಸಮೀಪದಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿರುವುದಕ್ಕೆ ಗ್ರಾಮಸ್ಥರು ಕಳೆದ ೪-೫ ವರ್ಷಗಳಿಂದ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಸಂಬAಧಿಸಿದ ಅಧಿಕಾರಿಗಳು ಹಾಗೂ ನಗರಸಭೆಯವರು ಜನರ ಆಕ್ಷೇಪಗಳನ್ನು ಪರಿಗಣಿಸದೆ ಕಾಮಗಾರಿ ಮುಂದುವರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ತ್ಯಾಜ್ಯ ಸಂಸ್ಕರಣಾ ಘಟಕದಿಂದ ಗ್ರಾಮಸ್ಥರ ಆರೋಗ್ಯ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ, ಜನವಸತಿ ಪ್ರದೇಶದಿಂದ ಸೂಕ್ತ ಅಂತರದಲ್ಲಿರುವ ಸ್ಥಳಕ್ಕೆ ಘಟಕವನ್ನು ಸ್ಥಳಾಂತರಿಸಬೇಕು. ಈ ಕುರಿತು ಸಂಬAಧಿಸಿದ ಅಧಿಕಾರಿಗಳು ಕೂಡಲೇ ಜನಹಿತದ ದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಯೋಜನೆಗಾಗಿ ೨೦೦೬ರಲ್ಲೇ ೨೧ ಎಕರೆ ಜಮೀನು ಖರೀದಿಸಲಾಗಿದೆ. ಇಲ್ಲಿ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸುವುದರಿಂದ ಗ್ರಾಮದ ಜನರ ಆರೋಗ್ಯ ಮತ್ತು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರಾಮದಿಂದ ಕೇವಲ ಸುಮಾರು ೧೦೦ ಮೀಟರ್ ಅಂತರದಲ್ಲಿರುವ ಘಟಕದಲ್ಲಿ ತ್ಯಾಜ್ಯ ಸಂಸ್ಕರಣೆ ವೇಳೆ ದುರ್ವಾಸನೆ ಹಾಗೂ ಮಾಲಿನ್ಯ ಉಂಟಾದರೆ, ಅದರ ಪರಿಣಾಮ ಜನವಸತಿ ಪ್ರದೇಶದ ಮೇಲೆ ಬೀರುವ ಸಾಧ್ಯತೆ ಇದೆ. ಇದರಿಂದ ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದು ಬೇರೆಡೆಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ಆತಂಕವೂ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ, ತ್ಯಾಜ್ಯ ಸಂಸ್ಕರಣಾ ಘಟಕವನ್ನು ಗ್ರಾಮದಿಂದ ಸಾಕಷ್ಟು ದೂರದಲ್ಲಿರುವ ಬೀಜ ಸಂಸ್ಕರಣಾ ಕೇಂದ್ರದ ಜಮೀನಿನತ್ತ ಸ್ಥಳಾಂತರಿಸುವAತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅಲ್ಲದೆ, ಖರೀದಿಸಿರುವ ಜಮೀನನ್ನು ಶಾಲೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಸುವ ಉದ್ದೇಶವಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಯ ನಿರ್ಧಾರವನ್ನು ಮರುಪರಿಶೀಲಿಸಿ, ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬAಧಿಸಿದ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಕಾಮಗಾರಿಯನ್ನು ಸ್ಥಳಾಂತರಿಸುವ ಕ್ರಮ ಕೈಗೊಳ್ಳದಿದ್ದರೆ, ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್ ಕಡೆಯಚೂರು, ಗ್ರಾಮಸ್ಥರಾದ ಭೀಮರೆಡ್ಡಿ ಪೊಲೀಸ್ ಪಾಟೀಲ್, ಯಂಕಪ್ಪ ದೊರೆ, ಭರತೇಶ್ ಪಿ.ಪಿ., ಗುರಲಿಂಗಯ್ಯ ಸ್ವಾಮಿ, ಮಲ್ಲರೆಡ್ಡಿ ಕಾಮರೆಡ್ಡಿ, ಭೀಮರೆಡ್ಡಿ ರಾಜೊಳ್ಳಿ, ಮಲ್ಲು ಚಟ್ನಳ್ಳಿ, ವಿಶ್ವನಾಥರೆಡ್ಡಿ ಪಿ.ಪಿ., ಜಯರಾಮ ನಾಯ್ಕರ್, ಹೀರಾನಾಯ್ಕ, ದೇವೇಂದ್ರಪ್ಪ ನಾಟೇಕರ್, ಬಸವರಾಜ ಹೊಸಳ್ಳಿ, ಮಹಾದೇವಪ್ಪ, ಕಾಶಪ್ಪ ಜಿನಿಕೇರಿ, ಬಾಲಪ್ಪ ಟುಬಾಕ್, ಮಣಿ ಸೈದಾಪುರ, ಭಾಸ್ಕರ್ ವಂಕಸAಭ್ರ ಸೇರಿದಂತೆ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.