Home ಜಿಲ್ಲೆ ಕಲಬುರಗಿ ಅಂಗನವಾಡಿ ನೌಕರರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ: ಶಾಂತಗAಟಿ

ಅಂಗನವಾಡಿ ನೌಕರರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ: ಶಾಂತಗAಟಿ

ಕಲಬುರಗಿ: ಅಂಗನವಾಡಿ ನೌಕರರು ತಮ್ಮ ಹಕ್ಕುಗಳು ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಜ್ಯ ಕಾರ್ಯಾಧ್ಯಕ್ಷೆ ಶಾಂತಗAಟಿ ಹೇಳಿದರು.
ನಗರದ ತಿಮ್ಮಾಪುರಿ ವೃತ್ತದ ಕನ್ನಡ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಟಿಯು ಸಂಯೋಜಿತ ತಾಲೂಕು ಸಮಿತಿಯಿಂದ ಆಯೋಜಿಸಿದ್ದ ೮ನೇ ಕಲಬುರಗಿ ನಗರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಅಂಗನವಾಡಿ ನೌಕರರು ಮಹಿಳೆಯರು ಮತ್ತು ಮಕ್ಕಳ ಆರೋಗ್ಯ, ಪೌಷ್ಟಿಕತೆ ಹಾಗೂ ಶಿಕ್ಷಣದ ಕ್ಷೇತ್ರದಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಸಮಾಜದ ಭವಿಷ್ಯ ರೂಪಿಸುವಲ್ಲಿ ಅವರ ಸೇವೆ ಅಮೂಲ್ಯವಾಗಿದೆ. ಇಂತಹ ಮಹತ್ವದ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕು ಎಂದರು.
ಅAಗನವಾಡಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬೇಡಿಕೆಗಳ ಈಡೇರಿಕೆಗೆ ಸಂಘಟನೆಯ ಶಕ್ತಿ ಮುಖ್ಯವಾಗಿದೆ. ನೌಕರರು ತಮ್ಮ ಹಕ್ಕುಗಳ ಕುರಿತು ಜಾಗೃತರಾಗಬೇಕು. ನ್ಯಾಯಯುತ ಬೇಡಿಕೆಗಳಿಗಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಮೂಲಕ ಹೋರಾಟವನ್ನು ಬಲಪಡಿಸಬೇಕು ಎಂದು ಶಾಂತಗAಟಿ ಕರೆ ನೀಡಿದರು.
ಸಮ್ಮೇಳನದಲ್ಲಿ ಸಂಘದ ಉಪಾಧ್ಯಕ್ಷ ಶ್ರೀಮಂತ ಬಿರಾದಾರ್, ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಬಿ. ಸಜ್ಜನ್, ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ, ಜಿಲ್ಲಾ ಕಾರ್ಯದರ್ಶಿ ರಾಜ್ಮತಿ ಪಾಟೀಲ, ತಾಲೂಕು ಕಾರ್ಯದರ್ಶಿ ರತ್ನಮ್ಮ ಆರ್. ಹಾಗೂ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ಚಂದಮ್ಮಗೋಳ ಸೇರಿದಂತೆ ಇತರರು ಮಹಿಳೆಯರು ಉಪಸ್ಥಿತರಿದ್ದರು.