Home ಜಿಲ್ಲೆ ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ನಮ್ಮ ಗುರಿ

ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ನಮ್ಮ ಗುರಿ


ಧಾರವಾಡ/ಕಿತ್ತೂರು,ಮಾ.೩೦: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕ ಪಾಲಿಕೆ ಮಾಡಬೇಕೆಂಬುದು ಮೊದಲಿನಿಂದಲೂ ನಮ್ಮ ಒತ್ತಾಯವಾಗಿದೆ ಎಂದು ಶಾಸಕ ವಿನಯ್ ಕುಲಕರ್ಣಿ ತಿಳಿಸಿದರು.


ಕಿತ್ತೂರಿನ ದೊಂಬರಕೊಪ್ಪದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊAದಿಗೆ ಸಮಾಲೋಚನೆ ನಡೆಸಲಾಗಿದೆ. ಆದರೆ ಈ ಪ್ರಕ್ರಿಯೆಗೆ ಯಾರು ತಡೆಯೊಡ್ಡುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಮಾರ್ಮಿಕವಾಗಿ ನುಡಿದರು.


ರಾಜ್ಯದ ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು. ನಾನು ಸಹ ಸ್ಟಾರ್ ಕ್ಯಾಂಪೇನರ್ ಆಗಿದ್ದು, ನಾಳೆಯಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದೇನೆ. ದಾವಣಗೆರೆಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅಲ್ಲಿಯೂ ಪಕ್ಷಕ್ಕೆ ಜಯ ಸಿಗಲಿದೆ ಎಂದರು.


ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ನನಗೂ ಅವಕಾಶ ನೀಡಬಹುದು ಎಂಬ ಆಶಯವಿದೆ. ಹೈಕಮಾಂಡ್ ಮನಸು ಮಾಡಿದರೆ ನಾನು ಸಚಿವನಾಗಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ. ಈ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ ಅಧ್ಯಕ್ಷ ಹಾಗೂ ಧಾರವಾಡ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.