
ಚಿಕ್ಕಬಳ್ಳಾಪುರ.ಜ೨೬- ವಿಶ್ವದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ವಿಶಾಲ ತತ್ವದ ತಳಹದಿಯ ಮೇಲೆ ರೂಪಿತವಾದ ಸಂವಿಧಾನ ನಮ್ಮ ಭಾರತ ದೇಶದ ಸಂವಿಧಾನವಾಗಿದೆ ಇದನ್ನು ಕಾಪಾಡಿಕೊಂಡು ಬರುವುದು ಭಾರತೀಯರ ಕರ್ತವ್ಯವಾಗಿದೆ ಎಂದು ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷ ಕೆ .ವಿ. ನವೀನ್ ಕಿರಣ್ ತಿಳಿಸಿದರು.
ಅವರು ಜಿಲ್ಲೆಯ ಪ್ರತಿಷ್ಠಿತ ಶ್ರೀ ಕೆ .ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ನಿರ್ವಹಣೆಯ ಪಂಚಗಿರಿ ಭೂತನ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನದ ಆಶಯಗಳನ್ನು ಪೂರ್ಣಗೊಳಿಸುವಲ್ಲಿ ಪ್ರತಿಯೊಬ್ಬ ಭಾರತೀಯರು ತಮ್ಮ ಪಾಲಿನ ಕರ್ತವ್ಯವನ್ನು ಮಾಡಬೇಕು ಎಂದು ಕರೆ ನೀಡಿದರು. ಗಣರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿ ಗಳಿಂದ ಏರ್ಪಡಿಸಿದ್ದ ಸಾಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಿತು. ಕಾರ್ಯಕ್ರಮದಲ್ಲಿ ಪಂಚಗಿರಿ ಬೋಧನಾ ಪ್ರೌಢಶಾಲೆಯ ಮುಖ್ಯೋಪಾ ಧ್ಯಾಯರು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



























