ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಶರಣು ಕಡಗಂಚಿ ಆಕ್ರೋಶ

ಕಲಬುರಗಿ :ಮೇ.25: ವಿಧಾನಪರಿಷತ್ ವಿಪಕ್ಷ ನಾಯಕ ಛಲುವಾದಿ ನಾರಾಯಣ ಸ್ವಾಮಿಯವರು ಸಚಿವರಾದ ಪ್ರಿಯಾಂಕ ಖರ್ಗೆಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡರಾದ ಶರಣು ಕಡಗಂಚಿ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ನಾಯಿ ತರ ಬೊಗಳು ಸಂಸ್ಕøತಿ ನಿಮ್ಮ ಪಕ್ಷದಲ್ಲಿ ಇದೆ, ನಮ್ಮ ಸಚಿವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ನೀವು ಇದೆ ಕೆಟ್ಟ ಸಂಸ್ಕೃತಿ ಮುಂದುವರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಎಂದು ನಾರಾಯಣಸ್ವಾಮಿಯವರಿಗೆ ಎಚ್ಚರಿಕೆ ನೀಡಿದರು. ನಿಮ್ಮ ಪಕ್ಷದ ಸಾಮಾನ್ಯ ಕಾರ್ಯಕರ್ತರು ನೆಹರು ರಿಂದ ಮಲ್ಲಿಕಾರ್ಜುನ ಖರ್ಗೆ ವರೆಗೆ ಏನು ಬೇಕಾದರು ಮಾತಾಡಬಹುದು, ಪ್ರಶ್ನೆ ಕೇಳಬಹುದು, ಆದರೆ ನಮ್ಮ ಪಕ್ಷದ ನಾಯಕರು, ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನಿಸಿದರೆ ನಿಮಗೆ ತೊಂದರೆ ಎಂದು ಶರಣು ಅವರು ಪ್ರಕಟಣೆ ಮೂಲಕ ಕಿಡಿಕಾರಿದ್ದಾರೆ.