Home ಜಿಲ್ಲೆ ವಿಪ್ರೋ ಏರೋಸ್ಪೇಸ್ ಪೂಲ್ ಕ್ಯಾಂಪಸ್‍ಗೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು

ವಿಪ್ರೋ ಏರೋಸ್ಪೇಸ್ ಪೂಲ್ ಕ್ಯಾಂಪಸ್‍ಗೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು

ವಿಜಯಪುರ, ಅ. 9: ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಗುರುವಾರ ವಿಪೆÇ್ರೀ ಏರೋಸ್ಪೇಸ್ ವತಿಯಿಂದ ಡಿಪೆÇ್ಲೀಮಾ ವಿದ್ಯಾರ್ಥಿಗಳಿಗಾಗಿ ಬೃಹತ್ ಪೂಲ್ ಕ್ಯಾಂಪಸ್ ಉದ್ಯೋಗ ಸಂದರ್ಶನ ನಡೆಯಿತು.
ಮೆಕ್ಯಾನಿಕಲ್ ಹಾಗೂ ಆಟೋಮೊಬೈಲ್ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸಂದರ್ಶನದಲ್ಲಿ ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಪೆÇ್ರೀ ಏರೋಸ್ಪೇಸ್‍ನ ಮಾನವ ಸಂಪನ್ಮೂಲ ಅಧಿಕಾರಿಗಳಾದ ಮಿಥಿಲೇಶ ಹಾಗೂ ಮರಿಯಾ ಅವರು ಲಿಖಿತ ಪರೀಕ್ಷೆ ಮತ್ತು ತಾಂತ್ರಿಕ ಸಂದರ್ಶನ ನಡೆಸಿದರು.
ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗ ಅಧಿಕಾರಿ ಸುಧನ್ವ ವಿ. ಕುಲಕರ್ಣಿ ಸೇರಿದಂತೆ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪೂಲ್ ಕ್ಯಾಂಪಸ್ ಆಯೋಜಿಸಿರುವುದಕ್ಕೆ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಹಾಗೂ ಸಚಿವ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.