Home ಜಿಲ್ಲೆ ಕಲಬುರಗಿ ಕಲಬುರಗಿ ಜಿಲ್ಲೆಯ ವಸತಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆ-1 ರಲ್ಲಿ ಒಟ್ಟಾರೆ ಶೇ. 98.24 ರಷ್ಟು ಫಲಿತಾಂಶ

ಕಲಬುರಗಿ ಜಿಲ್ಲೆಯ ವಸತಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆ-1 ರಲ್ಲಿ ಒಟ್ಟಾರೆ ಶೇ. 98.24 ರಷ್ಟು ಫಲಿತಾಂಶ

ಕಲಬುರಗಿ,ಏ.29:ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅಡಿಯಲ್ಲಿರುವ ಕಲಬುರಗಿ ಜಿಲ್ಲೆಯ ವಸತಿ ಶಾಲೆಗಳು 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ-1 ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ ಶೇ. 98.24 ರಷ್ಟು ಫಲಿತಾಂಶ ದಾಖಲಿಸಿವೆ. ಇದರ ಪ್ರಯುಕ್ತ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಮುಂದಿನ ಶೈಕ್ಷಣಿಕ ಅಭ್ಯಾಸಕ್ಕೆ ಶುಭ ಹಾರೈಸಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ಓಟ್ಟು 43 ವಸತಿ ಶಾಲೆಗಳಲ್ಲಿ 27 ಶಾಲೆಗಳು ನೂರಕ್ಕೆ ನೂರು ಫಲಿತಾಂಶ ಪಡೆದಿವೆ. ಅಂಕಗಳಿಕೆಯಲ್ಲಿ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆ (521) ಕಲಬುರಗಿ ವಸತಿ ಶಾಲೆಯ ವಿದ್ಯಾರ್ಥಿಯಾದ ಭಾಗ್ಯಶ್ರಿ ದಯಾನಂದ 620 (ಶೇ. 99.20) ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಹೆಬ್ಬಾಳ ಮೊರಾರ್ಜಿ ದೇಸಾಯಿ (ಹಿಂ.ವ 313) ವಸತಿ ಶಾಲೆಯ ಶ್ವೆತಾ 619 (ಶೇ. 99.04) ರಷ್ಟು ಅಂಕ ಪಡೆದು ದ್ವಿತಿಯ ಸ್ಥಾನ ಪಡೆದಿದ್ದು, ಬಿಳವಾರ(ಇಜೇರಿ) ಡಾ.ಬಿ.ಆರ್ ಅಂಬೇಡ್ಕರ್ (ಪ.ಜಾ. 812) ವಸತಿ ಶಾಲೆಯ ಅಂಕಿತಾ 615 (ಶೇ. 98.40) ರಷ್ಟು ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಫಲಿತಾಂಶಕ್ಕಾಗಿ ಶ್ರಮಿಸಿದ ವಸತಿ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಹಾಗೂ ಪ್ರಾಂಶುಪಾಲರಿಗೆ ಸಮಾಜ ಕಲ್ಯಾಣ ಇಲಾಖೆಯ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣಾ ಆಶಾಪೂರ್ ಹಾಗೂ ಜಿಲ್ಲಾ ಕ್ರೈಸ್ ಸಮನ್ವಯಾಧಿಕಾರಿ ನವೀದ್ ಅಂಜುಮ್ ಅಭಿನಂದಿಸಿದ್ದಾರೆ.

ಕ್ರೈಸ್ ವಸತಿ ಶಾಲೆಗಳಲ್ಲಿ ಅತ್ಯುತ್ತಮ ಬೋಧಕ ಸಿಬ್ಬಂದಿ ವರ್ಗ, ಉಚಿತ ಊಟ ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರ ಸುಸಜ್ಜಿತ ಪ್ರಯೋಗಾಲಯ, ಕಂಪ್ಯೂಟರ್ ಮತ್ತು ಸಂಗಿತ ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪೆÇೀಷಕರು ವಸತಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಅತ್ಯುತ್ತಮ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪಡೆದುಕೊಳ್ಳಬೇಕೆಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯಜಂಟಿ ನಿರ್ದೇಶಕರಾದ ಪ್ರೀತಿ ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.