
ಕಲಬುರಗಿ,ಅ.23-ಸಂವಿಧಾನದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವ ಉದ್ದೇಶದಿಂದ ಭಾರತೀಯ ದಲಿತ ಪ್ಯಾಂಥರ್ ವತಿಯಿಂದ ನವೆಂಬರ್ 2 ರಂದು ಚಿತ್ತಾಪುರ ಪಟ್ಟಣದಲ್ಲಿ ಸಂವಿಧಾನ ಪೀಠಿಕೆ ಹಾಗೂ ನೀಲಿ ಧ್ವಜದೊಂದಿಗೆ ಪಥ ಸಂಚಲನ ನಡೆಸಲು ನಿರ್ಧರಿಸಿದ್ದು, ಇದಕ್ಕೆ ಅನುಮತಿ ನೀಡಬೇಕು ಎಂದು ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಪ್ಪ ಎಂ.ಹೊಸ್ಮನಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಿಲಿಂದ ಸನಗುಂದಿ, ಜಿಲ್ಲಾ ಅಧ್ಯಕ್ಷ ರಮೇಶ ಚಿಮ್ಮಾಇದ್ಲಾಯಿ ಮನವಿ ಮಾಡಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ನ.2 ರಂದು ಚಿತ್ತಾಪುರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಪಥ ಸಂಚಲನ ನಡೆಸಲು ಉದ್ದೇಶಿಸಿರುವ ಪಥ ಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಈ ಪಥ ಸಂಚಲನದಲ್ಲಿ ಗಣವೇಶಧಾರಿಗಳು ದೊಣ್ಣೆ, ಲಾಠಿ ಹಿಡಿದು ಆಕ್ರಮಣಕಾರಿ ಪ್ರದರ್ಶನ ಮಾಡುವುದರಿಂದ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಆರ್‍ಎಸ್‍ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಅವರು ಆಗ್ರಹಿಸಿದ್ದಾರೆ.






























