
ಯಾದಗಿರಿ,ಮೇ.೧೭-ಸರ್ಕಾರಿ ಶಾಲೆಗಳನ್ನು ಉಳಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿರೋಧ ಚಳುವಳಿಯ ಭಾಗವಾಗಿ ಹೊಸ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ವಿದ್ಯಾರ್ಥಿಗಳಿಗೂ ಆತ್ಮೀಯ ಸ್ವಾಗತವನ್ನು ಕೋರುವ, “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ನಮ್ಮ ಶಾಲೆಯನ್ನು ನಮ್ಮೂರಲ್ಲಿಯೇ ಉಳಿಸಿ ಎಂಬ ಘೋಷವಾಕ್ಯದ ಬ್ಯಾನರ್ ಅನ್ನು ತಳಕ ಸರಕಾರಿ ಪ್ರಾಥಮಿಕ ಶಾಲೆಯ ಮುಂದೆ ಕಟ್ಟಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ರಾವೂರ್ ರವರು ಮಾತನಾಡುತ್ತಾ, ಕರ್ನಾಟಕ ರಾಜ್ಯ ಸರ್ಕಾರವು ಬಜೆಟ್ ನಲ್ಲಿ ಘೋಷಿಸಿರುವಂತೆ ಜೂನ್ ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಶಾಲೆಗಳ ೩ರಿಂದ ೫ ಕಿ. ಮೀ ವ್ಯಾಪ್ತಿಯ ಶಾಲೆಗಳನ್ನು ವಿಲೀನಗೊಳಿಸಲಾಗುವುದೆಂದು ೧೫ ಅಕ್ಟೋಬರ್ ೨೦೨೫ರ ಆದೇಶವು ತಿಳಿಸುತ್ತದೆ. ಈ ಕುರಿತು ಅನೇಕ ಜಿಲ್ಲೆಗಳಲ್ಲಿ ಪಟ್ಟಿ ಕೂಡ ನಮಗೆ ದೊರೆತಿದ್ದು, ಸರ್ಕಾರ ಪೋಷಕರ ಅನುಮತಿ ಇಲ್ಲದೇ ತುಂಬಾ ಅಪ್ರಜಾತಾಂತ್ರಿಕವಾಗಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಅವರ ಎಲ್ಲಾ ನಡೆಗಳು ಗಮನಿಸಿದ್ದಲ್ಲಿ ಬಡವರ ಮಕ್ಕಳನ್ನು ಶಿಕ್ಷಣದಿಂದ ದೂರ ತಳ್ಳುವ ಕೆಲಸಕ್ಕೆ ಸರ್ಕಾರ ಟೊoಕ ಕಟ್ಟಿ ನಿಂತತೆ ತೋರುತ್ತಿದೆ ಎಂದು ಆರೋಪಿಸಿದರು.
ಈ ಕೆಪಿಎಸ್ ಮ್ಯಾಗ್ನೆಟ್ ನೀತಿಯ ಪ್ರಕಾರ ಸರ್ಕಾರ ತಳಕ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಹೆಡಗಿಮದ್ರಾ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡಲು ಹೊರಟಿದೆ. ನಾವುಗಳೇ ಹೋಗಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲ. ಇಂತಹ ಸಂದರ್ಭದಲ್ಲಿ ನಮ್ಮ ಮಕ್ಕಳು ಹೇಗೆ ಹೋಗಲು ಸಾಧ್ಯ?! ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಬೆಳಸಬೇಕೆಂದು ಊರಿನ ಪೋಷಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಳಕ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯದರ್ಶಿಗಳಾದ ಗಂಗಾಧರ್, ಸದಸ್ಯರಾದ ಜಮಾಲ್ ಸಾಬ್ ಹಾಗೂ ಂIಆSಔ ಯಾದಗಿರಿ ಜಿಲ್ಲಾ ಸಮಿತಿ ಸದಸ್ಯರಾದ ವಿಕ್ರಮ್ ಸೇರಿದಂತೆ ಅನೇಕ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






















