Home ಜಿಲ್ಲೆ ಬೆಂಗಳೂರು ವಿಶೇಷ ಚೇತನರ ಪೋಷಕರು ದೃತಿಗೆಡಬೇಕಾಗಿಲ್ಲ

ವಿಶೇಷ ಚೇತನರ ಪೋಷಕರು ದೃತಿಗೆಡಬೇಕಾಗಿಲ್ಲ

ಕೆಂಗೇರಿ,ಜು೩೦: ವಿಶೇಷ ಚೇತನರ ಪೋಷಕರು ಯಾವುದೇ ಕಾರಣಕ್ಕೂ ದೃತಿಗೆಡಬೇಕಾಗಿಲ್ಲ, ನಿಮ್ಮೊಂದಿಗೆ ಸರ್ಕಾರ, ಸಮುದಾಯ, ಸಮಾಜ ಒಗ್ಗಟ್ಟಾಗಿ ನಿಂತು ವಿಶೇಷ ಚೇತನರ ಸಬಲೀಕರಣಕ್ಕಾಗಿ ಎಲ್ಲ ರೀತಿಯ ಸಹಕಾರ, ಪ್ರೋತ್ಸಾಹ ನೀಡಿ ಕಾರ್ಯನಿರ್ವಹಿಸಲಾಗುವುದು ಎಂದು ಶಾಸಕ ಎಸ್. ಟಿ. ಸೋಮಶೇಖರ್ ತಿಳಿಸಿದರು.


ಯಶವಂತಪುರ ವಿಧಾನಸಭಾ ಕ್ಷೇತ್ರ ಆಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಿಪುರ ಗ್ರಾಮದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ವಿಶೇಷಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆಗಳ ವಿಭಾಗದ ವತಿಯಿಂದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳು, ಉಚಿತ ಬಸ್ ಪಾಸ್, ವೀಲ್ ಚೇರ್ ಯುಡಿಐಡಿ ಕಾರ್ಡ್ ಹಾಗೂ ವಿಶೇಷ ಚೇತನ ಕುಟುಂಬಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು.


ಅಗರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಲತಾ ಮಂಜುನಾಥ್ ಮಾತನಾಡಿ ವಿಶೇಷ ಚೇತನರು ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತಂದಿರುವುದು ಅವರ ಅಪಾರ ಪರಿಶ್ರಮಕ್ಕೆ ಸಾಕ್ಷಿಯಾಗಿದೆ ಎಂದರು. ವಿಶೇಷ ಚೇತನರ ಸರ್ವಾಂಗೀಣ ಅಭ್ಯುದಕ್ಕಾಗಿ ಹಗಲಿರುಳು ಶ್ರಮಿಸುವುದಾಗಿ ತಿಳಿಸಿದರು.


ಬಿಎಸ್‌ಎಸ್ಯನ್ನ ಮಾಜಿ ಅಧ್ಯಕ್ಷ ರಾಮಕೃಷ್ಣ,ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ದೇವರಾಜ್, ಎಂ ಆರ್ ಡಬ್ಲ್ಯೂ ನೋಡಲ್ ಅಧಿಕಾರಿ ಗೋಪಾಲಕೃಷ್ಣ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರುಕ್ಮಿಣಿಬಾಯಿ, ಶನೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ನಂಜುಂಡಪ್ಪ,ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.