Home ಜಿಲ್ಲೆ ಕಲಬುರಗಿ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕಲಬುರಗಿ: ಏ.27:ನಗರದ ವಾರ್ಡ್ ನಂ.46ರ ಐ ವಾನ್ ಶಾಹಿ ಬಡಾವಣೆಯಲ್ಲಿ ಮಹಾನಗರ ಪಾಲಿಕೆಯ ಅನುದಾನದಲ್ಲಿ ರೂ.89 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್ ಹಾಗೂ ಮಾಜಿ ಮೇಯರ್ ವಿಶಾಲ್ ದರ್ಗಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮರನಾಥ ಪಾಟೀಲ್ ಹಾಗೂ ವಿಶಾಲ್ ದರ್ಗಿ ಅವರು, ನಗರದ ಬಡಾವಣೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ಉದ್ದೇಶದಿಂದ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಉದ್ಯಾನವನದಿಂದ ಸ್ಥಳೀಯ ನಿವಾಸಿಗಳಿಗೆ ವಾಯುವಿಹಾರ, ಮಕ್ಕಳ ಆಟ-ಪಾಠ ಹಾಗೂ ವಿಶ್ರಾಂತಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹೇಶ್ ರೆಡ್ಡಿ, ಮಾದೇವಪ್ಪ ರಾಂಪುರೆ, ಡಾ. ಅರೋಹಿತ್ ಭಂಡಾರಿ, ಅತ್ತರ ಬಿದರಿ, ವಿಶಾಲ್ ದೇಶಮುಖ್, ಸುರೇಶ ಹೊಸಮನಿ ಸೇರಿದಂತೆ ಬಡಾವಣೆಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.