Home ಜಿಲ್ಲೆ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ರೇವಣಸಿದ್ಧ ಹಡಪದ

ಹಡಪದ ಅಪ್ಪಣ್ಣ ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ರೇವಣಸಿದ್ಧ ಹಡಪದ

ಬೀದರ್ ಜು ೨೮:ಪ್ರತಿ ವರ್ಷದಂತೆ ಈ ವರ್ಷವು ಜುಲೈ ೨೯ ರಂದು ಸರಕಾರದಿಂದ ನಡೆಯಲಿರುವ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಭಾಂದವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಡಪದ ಸಮಾಜದ ಯುವ ಮುಖಂಡ ರೇವಣಸಿದ್ಧ ಹಡಪದ ಮನವಿ ಮಾಡಿದ್ದಾರೆ.

ಇದೇ ಜುಲೈ ೨೯ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ೧೦:೩೦ ಗಂಟೆಗೆ ಶಿವಾಜಿ ವೃತ್ತದಿಂದ ವಿವಿಧ ಕಲಾ ತಂಡಗಳೊAದಿಗೆ ಮೆರವಣಿಗೆ ನಡೆಯಲಿದೆ.

ನಂತರ ಮದ್ಯಾಹ್ನ ೧ ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಆದರಿಂದ ಸಮಾಜದ ಭಾಂದವರು, ಸಂಘ ಸಂಸ್ಥೆಗಳ ಪ್ರಮುಖರು, ಹಾಗೂ ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ರೇವಣಸಿದ್ಧ ಹಡಪದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.