Home ಜಿಲ್ಲೆ ಕಲಬುರಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

ಕಲಬುರಗಿ : ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹಕ್ಕೆ ವ್ಯಾಯಮ ದೊರೆತು, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಕ್ರೀಡಾಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಬೇಕು. ಹಾಕಿ ಕ್ಷೇತ್ರದ ಮೂಲಕ ಭಾರತದ ಕೀರ್ತಿಯನ್ನು ವಿಶ್ವದೆಲ್ಲೆಡೆ ಪಸರಿಸಿದ ಧ್ಯಾನಚಂದ್‌ರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದುಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.
ನಗರದ ಗಂಗಾ ನಗರದಲ್ಲಿರುವ ‘ಶ್ರೀ ವಿವೇಕಾನಂದ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟಿçÃಯಕ್ರೀಡಾ ದಿನಾಚರಣೆ’ಯಲ್ಲಿ ಭಾಗವಹಿಸಿ, ಅವರು ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ಗುಡಬಾ ಮಾತನಾಡಿ, ಕ್ರೀಡೆಯಲ್ಲಿ ದೊಡ್ಡದು-ಸಣ್ಣದು ಎಂಬುದಿಲ್ಲ. ಯಾವುದೇ ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ, ಅದರ ನೀತಿ-ನಿಯಮಗಳ ಬಗ್ಗೆ ಸರಿಯಾಗಿ ಅರ್ಥಮಾಡಿಕೊಂಡು, ಪೂರ್ವಸಿದ್ಧತೆಯೊಂದಿಗೆ ತೊಡಗಬೇಕು. ದೊರೆತ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡುವುದರೊಂದಿಗೆ ನಮ್ಮ ಭಾಗಕಡಿಮೆಯಿಲ್ಲವೆಂದು ತೋರಿಸಬೇಕು. ಆದರೆ ಇತ್ತೀಚಿನ ಕೆಲ ವರ್ಷಗಳಲ್ಲಿ ಕೇವಲ ಅಂಕಗಳಿಗೆ ಜೋತುಬಿದ್ದ ಪರಿಣಾಮ ಮತ್ತು ಮೋಬೈಲ್ ಹಾವಳಿಯಿಂದ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಕಡಿಮೆಯಾಗಿದೆ. ಇದಕ್ಕೆ ಪಾಲಕ-ಪೋಷಕರ ಪ್ರೋತ್ಸಾಹ ಕೊರೆತೆ ಕೂಡಾ ಇದೆ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಕಾವೇರಿ ವಿ.ಹೂನ್ನಳಿ, ಶಿಕ್ಷಕಿಯರಾದ ಸೋನಿಯಾ ಎಸ್., ಶಶಿಕಲಾ ಬಿ.ಕುಂಬಾರ, ಸುನಂದಾ ಎಸ್.ಹಿರೇಮಠ, ಅಕ್ಷತಾ ಎಂ., ಅರ್ಚನಾ ಕುಲಕರ್ಣಿ, ಪ್ರತಿಭಾ, ವಿಶಾಲಾಕ್ಷಿ ಡಿ., ಶೃತಿ ಬಿ.ಕುಲಕರ್ಣಿ, ಸಿದ್ದಮ್ಮ ಎಂ.ಕುAಬಾರ, ಮೀನಾಕ್ಷೀ ಎಂ., ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.