
ಕೊಲ್ಹಾರ:ಜು.೩೦: ವಿಬಿಜಿ ರಾಮ್ ಜಿ ಯೋಜನೆಯಡಿ ಕೆರೆ, ನಾಲಾ ಹೂಳೆತ್ತುವಿಕೆ, ?೫ ಲಕ್ಷದೊಳಗಿನ ಕಾಮಗಾರಿಗಳಿಗೆ ಟೆಂಡರ್ ವಿನಾಯಿತಿ ಹಾಗೂ ಇತರೆ ಕಾಮಗಾರಿಗಳ ಕುರಿತು ಜಿಲ್ಲೆಯ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಅನ್ವಯಿಸುವಂತೆ ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ರಾಜ್ಯಾಧ್ಯಕ್ಷ ರಮೇಶ್ ನಡೆಗೇರಿ ನೇತೃತ್ವದಲ್ಲಿ ಸೋಮವಾರ ಸಿಇಒ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರಸ್ತುತ ಜಾರಿಯಲ್ಲಿರುವ ‘ವಿವಿಜಿ ರಾಮ್ ಜಿ’ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಪ್ರಮುಖ ಕಾಮಗಾರಿಗಳ ಕುರಿತು ನಿಯಮಾವಳಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ವಿಜಯಪುರ ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೆಲಸ ಪ್ರಾರಂಭಿಸಲು ತೀವ್ರ ಆಡಳಿತಾತ್ಮಕ ತೊಡಕು ಹಾಗೂ ಗೊಂದಲ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಗೊಂದಲದಿAದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿದ್ದು, ಸಾರ್ವಜನಿಕ ಕೆಲಸಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪಿಡಿಒಗಳು ಗೊಂದಲವಿಲ್ಲದೆ ನಿಯಮಾನುಸಾರ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕೆರೆ, ನಾಲಾ ಹಾಗೂ ಕಾಲುವೆಗಳ ಹೂಳೆತ್ತುವ ಕಾಮಗಾರಿಗಳು ಯೋಜನೆಯ ಅನುಮೋದಿತ ಕಾಮಗಾರಿಗಳ ವ್ಯಾಪ್ತಿಗೆ ಒಳಪಡುತ್ತವೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು ಹಾಗೂ ಜಿಲ್ಲಾ ಪಂಚಾಯಿತಿಯಿAದ ಹೂಳೆತ್ತುವ ಕಾರ್ಯಕ್ಕೆ ಅಧಿಕೃತ ಸಮ್ಮತಿ ಮತ್ತು ಅನುಮತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಇದೇ ವೇಳೆ ?೫ ಲಕ್ಷದೊಳಗಿನ ಸಣ್ಣ ಹಾಗೂ ತುರ್ತು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿ ಹೊರಡಿಸಿ, ಸಾರ್ವಜನಿಕ ತುರ್ತು ಸಂದರ್ಭಗಳಲ್ಲಿ ಟೆಂಡರ್ ಮಾಡದೆಯೇ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.
ಯೋಜನೆಯಲ್ಲಿ ಅನುಮೋದಿತ ಪಟ್ಟಿಯ ಹೊರತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಗತ್ಯ ಸಾರ್ವಜನಿಕ ಕಾಮಗಾರಿಗಳನ್ನು ಕೈಗೊಳ್ಳಲು ಸೂಕ್ತ ಅನುಮೋದನೆ ಹಾಗೂ ಮಾರ್ಗಸೂಚಿ ನೀಡುವಂತೆಯೂ ಒತ್ತಾಯಿಸಲಾಗಿದೆ.
ಈ ಮೇಲ್ಕಂಡ ಗೊಂದಲಗಳಿAದ ಜಿಲ್ಲೆಯ ಎಲ್ಲಾ ಪಿಡಿಒಗಳಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು ತೊಂದರೆಯಾಗುತ್ತಿರುವುದರಿAದ, ಇಲಾಖೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅನ್ವಯಿಸುವಂತೆ ತಕ್ಷಣವೇ ಅಧಿಕೃತ ಸ್ಪಷ್ಟೀಕರಣ ಸುತ್ತೋಲೆ ಹೊರಡಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸುತ್ತೋಲೆ ದೊರೆತ ತಕ್ಷಣ ಎಲ್ಲಾ ಪಿಡಿಒಗಳು ನಿಯಮಾನುಸಾರ ಕಾಮಗಾರಿಗಳನ್ನು ಆರಂಭಿಸಲು ಸಿದ್ಧರಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಿಂದಗಿ ಹಾಗೂ ಆಲಮೇಲ ತಾಲೂಕು ಸಂಘದ ಅಧ್ಯಕ್ಷ ಸಂತೋಷ ಹಾಗೂ ಬಬಲೇಶ್ವರ ತಾಲೂಕು ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು.






























