Home ಜಿಲ್ಲೆ ಕಲಬುರಗಿ ಗಣಪತಿ ಹಬ್ಬದ ಹಿನ್ನೆಲೆ ಕರಜಗಿಯಲ್ಲಿ ಶಾಂತಿ ಸಭೆಕಾನೂನು ಪಾಲನೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ

ಗಣಪತಿ ಹಬ್ಬದ ಹಿನ್ನೆಲೆ ಕರಜಗಿಯಲ್ಲಿ ಶಾಂತಿ ಸಭೆಕಾನೂನು ಪಾಲನೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ

ಕರಜಗಿ: ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಶ್ರೀ ಯಲ್ಲಾಲಿಂಗೇಶ್ವರ ಮಠದ ಆವರಣದಲ್ಲಿ ಪೆÇಲೀಸ್ ಇಲಾಖೆಯ ವತಿಯಿಂದ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಪಿಎಸ್‍ಐ ಶ್ರೀಶೈಲ ಅಂಬಾಟೆ ಮಾತನಾಡಿ, ಗಣಪತಿ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು. ಗಣಪತಿ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೊದಲು ಜೆಸ್ಕಾಂ ಇಲಾಖೆಯ ಅನುಮತಿ ಮತ್ತು ಪೆÇಲೀಸ್ ಠಾಣೆಯ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ತಿಳಿಸಿದರು.
ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳ ಮುಂಭಾಗದಲ್ಲಿ ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಬೇಕು. ಯಾವುದೇ ಗಲಾಟೆ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಎಲ್ಲ ಧರ್ಮಗಳ ಭಾವನೆಗಳನ್ನು ಗೌರವಿಸಿ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸಬೇಕು ಎಂದು ಹೇಳಿದರು.ಗ್ರಾಮದಲ್ಲಿ ಶಾಂತಿ ಕದಡುವ ರೀತಿಯಲ್ಲಿ ಗಲಾಟೆ ಮಾಡುವವರು ಅಥವಾ ಕಾನೂನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‍ಐ ಶ್ರೀಶೈಲ ಅಂಬಾಟೆ ಖಡಕ್ ಎಚ್ಚರಿಕೆ ನೀಡಿದರು.ಸಭೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಹಿರಿಯರು ಮಾತನಾಡಿ, “ನಾವೆಲ್ಲರೂ ಒಂದೇ. ಗ್ರಾಮದ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಪೆÇಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಭರವಸೆ ನೀಡಿದರು.
ಗಣಪತಿ ಹಬ್ಬವನ್ನು ಪರಸ್ಪರ ಗೌರವ, ಶಾಂತಿ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸುವಂತೆ ಸಭೆಯಲ್ಲಿ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಶಾಳ ಉಕ್ಕಡ ಪೆÇಲೀಸ್ ಠಾಣೆಯ ಎಸ್‍ಐ ಬಸವರಾಜ ಪೂಜಾರಿ, ಇಮಾಮ್ ಬಾಗ್ವಾನ್, ಪೆÇಲೀಸ್ ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.