Home ಜಿಲ್ಲೆ ಭೀಮಾ ನದಿಗೆ ಕೊಳಚೆ ನೀರು ಸೇರುವುದಕ್ಕೆ ಶಾಶ್ವತ ಕಡಿವಾಣ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ

ಭೀಮಾ ನದಿಗೆ ಕೊಳಚೆ ನೀರು ಸೇರುವುದಕ್ಕೆ ಶಾಶ್ವತ ಕಡಿವಾಣ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ

ಯಾದಗಿರಿ: ನಗರದ ಸ್ವಚ್ಛತೆ, ನೈರ್ಮಲ್ಯ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ?೨೮೭.೭೦ ಕೋಟಿ ವೆಚ್ಚದಲ್ಲಿ ಸಮಗ್ರ ಒಳಚರಂಡಿ ವ್ಯವಸ್ಥೆ (Uಟಿಜeಡಿgಡಿouಟಿಜ ಆಡಿಚಿiಟಿಚಿge Sಥಿsಣem) ಜಾರಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದ್ದಾರೆ.

ಯೋಜನೆಯ ವಿಸ್ತೃತ ಯೋಜನಾ ವರದಿ (ಆPಖ) ಸಿದ್ಧಪಡಿಸಿ ಈಗಾಗಲೇ ತಾಂತ್ರಿಕ ಅನುಮೋದನೆ ಪಡೆಯಲಾಗಿದ್ದು, ಆಡಳಿತಾತ್ಮಕ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಯ ಪ್ರಮುಖ ಭಾಗವಾಗಿ ೯ ಎಂಎಲ್‌ಡಿ ಸಾಮರ್ಥ್ಯದ ಮಲಿನ ನೀರು ಸಂಸ್ಕರಣಾ ಘಟಕ (SಖಿP) ಸ್ಥಾಪಿಸಲು ಉದ್ದೇಶಿಸಲಾಗಿದೆ. ಭೀಮಾ ನದಿಯ ಸಮೀಪದಲ್ಲಿ Weಣ Weಟಟ ನಿರ್ಮಿಸಿ, ನಗರದ ವಿವಿಧ ಬಡಾವಣೆಗಳಿಂದ ಹರಿದುಬರುವ ಕೊಳಚೆ ನೀರನ್ನು ಸಂಗ್ರಹಿಸಿ ಪಂಪ್‌ಗಳ ಮೂಲಕ ಎಸ್‌ಟಿಪಿಗೆ ರವಾನಿಸಲಾಗುವುದು. ಅಲ್ಲಿ ಮಲಿನ ನೀರನ್ನು ವೈಜ್ಞಾನಿಕ ವಿಧಾನದಲ್ಲಿ ಸಂಸ್ಕರಿಸಿದ ಬಳಿಕ ನಿಯಮಾನುಸಾರ ವಿಲೇವಾರಿ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಪ್ರಸ್ತುತ ನಗರದ ಕೆಲವು ಪ್ರದೇಶಗಳ ತೆರೆದ ಚರಂಡಿಗಳ ಮೂಲಕ ಕೊಳಚೆ ನೀರು ನೇರವಾಗಿ ಭೀಮಾ ನದಿಗೆ ಸೇರುತ್ತಿರುವುದರಿಂದ ಉಂಟಾಗುತ್ತಿರುವ ಜಲಮಾಲಿನ್ಯವನ್ನು ನಿಯಂತ್ರಿಸಲು ಈ ಯೋಜನೆ ಮಹತ್ವದ ಹೆಜ್ಜೆಯಾಗಲಿದೆ. ಒಳಚರಂಡಿ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಜಾರಿಯಾದ ಬಳಿಕ ಸಂಸ್ಕರಿಸದ ಮಲಿನ ನೀರು ನದಿಗೆ ಸೇರುವುದನ್ನು ತಡೆಯಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಮಗ್ರ ಒಳಚರಂಡಿ ವ್ಯವಸ್ಥೆಯಿಂದ ನಗರದ ನೈರ್ಮಲ್ಯ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ ಕಂಡುಬರುವುದರ ಜೊತೆಗೆ ಸಾರ್ವಜನಿಕರ ಆರೋಗ್ಯದ ಮೇಲೂ ಸಕಾರಾತ್ಮಕ ಪರಿಣಾಮ ಉಂಟಾಗಲಿದೆ. ಮಲಿನ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂದರು.

ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತ ತಕ್ಷಣ ಯೋಜನೆ ಅನುಷ್ಠಾನಕ್ಕೆ ಮುಂದಾಗಲಾಗುವುದು. ಯಾದಗಿರಿಯನ್ನು ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ?೨೮೭.೭೦ ಕೋಟಿ ವೆಚ್ಚದ ಸಮಗ್ರ ಒಳಚರಂಡಿ ಯೋಜನೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದ್ದಾರೆ.