
ಕಲಬುರಗಿ,ಮಾ.25-ಎನ್‍ಎಸ್‍ಎಸ್ ಶಿಬಿರದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜಶೇಖರ ಬಸನಾಯಕ ಹೇಳಿದರು.
ನಗರದ ಕೆಪಿಇ ಸಂಸ್ಥೆಯ ಡಾ.ಅಂಬೇಡ್ಕರ್ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ 2025 -26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮತ್ತು ನಾಗರಿಕ ಪ್ರಜ್ಞೆಯನ್ನು ಬೆಳೆಸುವುದು. ತಮ್ಮ ಶೈಕ್ಷಣಿಕ ಜ್ಞಾನವನ್ನು ಸಾಮಾಜಿಕ ಸಮಸ್ಯೆಗಳ ಪ್ರಾಯೋಗಿಕ ಪರಿಹಾರಕ್ಕಾಗಿ ಬಳಸಿಕೊಳ್ಳುವ ಸಾಮಥ್ರ್ಯವನ್ನು ನೀಡುವುದು. ಗುಂಪಿನಲ್ಲಿ ಕೆಲಸ ಮಾಡುವ ಮತ್ತು ಜವಾಬ್ದಾರಿಗಳನ್ನು ಹಂಚಿಕೊಳ್ಳುವ ಕೌಶಲ್ಯವನ್ನು ಅಭಿವೃದ್ಧಿಪಡಿಸುವುದು. ಪ್ರಜಾಸತ್ತಾತ್ಮಕ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಲು ಅವಕಾಶ ನೀಡುವುದು. ರಾಷ್ಟ್ರೀಯ ಏಕತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವುದರ ಮೂಲಕ ವಿದ್ಯಾರ್ಥಿಗಳು ನಾನು ನನಗಾಗಿ ಅಲ್ಲ ನಾನು ನಿಮಗಾಗಿ ಶಿಕ್ಷಣ ಎಂದರೆ ನಾಲ್ಕು ಗೋಡೆಗಳ ಮಧ್ಯದಲ್ಲಿ ಅಲ್ಲ , ಮುಂದಿನ ಬೆಳವಣಿಗೆಯನ್ನು ವಿದ್ಯಾರ್ಥಿಗಳ ಸವಾರ್ಂಗಣಿ ಬೆಳವಣಿಗೆ ಸಾಧಿಸಬೇಕಾಗಿದರೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರೆ ಸಾಧ್ಯ ಹೀಗೆ ತಮ್ಮ ವ್ಯಕ್ತಿತ್ವ ವಿಕಾಸನ ಮಾಡಿಕೊಳ್ಳಲು ಸಾಧ್ಯ ಎಂದರು.
ಸಮಾರಂಭದ ಮುಖ್ಯ ಅತಿಥಿಗಳಾದ ಕೆಪಿಇ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಶೀಲವಂತ ಅವರು ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಸ್ಪರ್ಧಾತ್ಮಕ ಮನೋಭಾವನೆಯ ಗುಣಗಳನ್ನು ಬೆಳೆಸಿಕೊಳ್ಳಲು ಪೆÇ್ರೀತ್ಸಾಹಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕೆಪಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್ ಅವರು ಮಾತನಾಡುತ್ತ, ರಾಷ್ಟ್ರೀಯ ಸೇವಾ ಯೋಜನೆಯು ಭಾರತದ ಯುವ ಪೀಳಿಗೆಗೆ ಶಿಕ್ಷಣದ ಜೊತೆಗೆ ಜೀವನದ ಪಾಠವನ್ನು ಕಲಿಸುವ ಒಂದು ಅದ್ವಿತೀಯ ಕಾರ್ಯಕ್ರಮವಾಗಿದೆ. ಇದು ಪುಸ್ತಕದ ಜ್ಞಾನವನ್ನು ಸಮಾಜದ ವಾಸ್ತವಗಳಿಗೆ ಜೋಡಿಸುತ್ತದೆ ಇಂದಿನ ಮಕ್ಕಳು ನಾಳೆಯ ನಾಗರಿಕರಾಗಿ ಭವ್ಯ ಭಾರತವನ್ನು ಕಟ್ಟಬೇಕು ಎಂದರು. ವೇದಿಕೆಯ ಮೇಲೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಿದ್ದಪ್ಪಾ ಎಮ್. ಕಾಂತಾ, ಐಕ್ಯೂಎಸಿಯ ಸಂಯೋಜಕರಾದ ಡಾ. ಸಿದ್ದಾರ್ಥ್ ಮದನ್ಕರ ಇದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಿರ್ಮಲಾ ಸಿರಗಾಪುರ್, ಗ್ರಂಥಪಾಲಕರಾದ ರಮೇಶ್ ಜಾಬನೂರು, ಡಾ ಸುದರ್ಶನ ಮದನ್ಕರ್, ಡಾ.ಅರುಣ ಜೋಳದಕೂಡ್ಲಿಗಿ ಇತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಡಾ. ವಸಂತ್ ನಾಶಿ ಸ್ವಾಗತ ಮತ್ತು ಪ್ರಸ್ತಾವಿಕ ಮಾತನಾಡಿದರು. ಡಾ. ಗಾಂಧೀಜಿ ಮೋಳಕೆರೆ ನಿರೂಪಿಸಿದರು ಡಾ. ಹರ್ಷವರ್ಧನ್ ಬಿ ವಂದಿಸಿದ್ದರು.




























