
ಜಮಖಂಡಿ:ಮಾ.25: ನಗರದಲ್ಲಿ ಪೆಟ್ರೋಲ್ ಕಳ್ಳತನ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕೆಡವುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಈ ಸಂಬಂಧದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಲವರು ರಾತ್ರಿ ವೇಳೆ ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಬಳಿಗೆ ಬಂದು ಪೆಟ್ರೋಲ್ ಕಳ್ಳತನ ಮಾಡುತ್ತಿರುವುದು ಹಾಗೂ ವಾಹನಗಳನ್ನು ಕೆಡವುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ನಗರದ ಸಾರ್ವಜನಿಕರು ಕಿಡಗೇಡಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೆÇೀಲಿಸರನ್ನು ಒತ್ತಾಯಿಸಿದ್ದಾರೆ.




























