
ಜಮಖಂಡಿ, ಜೂ 20: ತಾಲೂಕಿನ ಗೋಟೆ-ಗದ್ಯಾಳ ಗ್ರಾಮದ ಮಧ್ಯಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಕಾಜಿಬಿಳಗಿ ಗ್ರಾಮದ ಭೀಮವ್ವ ಹಣಮಂತ ಹಳೆಜೋಳ (50) ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯಂತೆ, ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಮವ್ವ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸಾವಳಗಿ ಪೆÇಲೀಸ್ ಠಾಣೆಯ ಪಿ.ಎಸ್.ಐ ಅಪ್ಪಣ್ಣ ಐಗಾಳಿ ನೇತೃತ್ವದ ಪೆÇಲೀಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


























