
ಗುರುಮಠಕಲ್ : ಮೇ.೧೩: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನೂತನ ರಕ್ತಶುದ್ಧೀಕರಣ (ಡಯಾಲಿಸಿಸ್) ಘಟಕವನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ಭಾಗದ ಜನರು ಬಹಳ ಮುಗ್ಧರು. ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಮನೆಯ ಅಣ್ಣ-ತಮ್ಮಂದಿರAತೆ ಭಾವಿಸಿ ಸೇವೆ ಸಲ್ಲಿಸಬೇಕು” ಎಂದು ಸೂಚನೆ
ಡಯಾಲಿಸಿಸ್ ಚಿಕಿತ್ಸೆಗೆ ಆಸ್ಪತ್ರೆಗೆ ಬರುವ ಮೂತ್ರಪಿಂಡ ರೋಗಿಗಳನ್ನು ಮಾನವೀಯ ದೃಷ್ಟಿಯಿಂದ ನೋಡಿಕೊಳ್ಳಿ , ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಉತ್ತಮ ಚಿಕಿತ್ಸೆ ನೀಡಿ ಕಳುಹಿಸಬೇಕು ಎಂದು ವೈದ್ಯಕೀಯ ಸಿಬ್ಬಂದಿಗೆ ತಿಳಿಸಿದರು. ಸರ್ಕಾರದ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಎರಡು ರಕ್ತಶುದ್ಧೀಕರಣ ಘಟಕಗಳನ್ನು ತರಲಾಗಿದೆ. ನಾನು ಐದು ಕೇಳಿದ್ದೆ, ಸಾಧ್ಯ ಎರಡು ನೀಡಿದ್ದಾರೆ ಎಂದರು. ನಮ್ಮ ಭಾಗದ ಬಡಜನರು ಖಾಸಗಿ ಆಸ್ಪತ್ರೆಗೆ ಹೋಗಲು ಹಣದ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಂತಹವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ತೊಂದರೆ ಆಗದಂತೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಈ ಭಾಗದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿದ ಶಾಸಕರು, “ಅತಿಯಾಗಿ ರಾಸಾಯನಿಕ ಮಿಶ್ರಿತ ಮಸಾಲೆಗಳು, ಕಲುಷಿತ ಆಹಾರ ಪದಾರ್ಥಗಳು ಹಾಗೂ ತಂಪು ಪಾನೀಯಗಳ ಬಳಕೆಯಿಂದ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಅನಿಸುತ್ತದೆ. ನಮ್ಮ ಭಾಗದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ನೋವಿನ ಸಂಗತಿ” ಎಂದು ಹೇಳಿದರು. ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬAಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಯಾವುದೇ ಅನಾಹುತಗಳು ನಡೆದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡರು. ನಿರ್ಮಾಣ ಹಂತದಲ್ಲಿರುವ ೫೦ ಹಾಸಿಗೆಗಳ ಆಸ್ಪತ್ರೆ ಕಟ್ಟಡವನ್ನು ವೀಕ್ಷಿಸಿದ ಶಾಸಕರು, ಸಂಬAಧಪಟ್ಟ ಇಂಜಿನಿಯರ್‌ಗಳನ್ನು ಸ್ಥಳಕ್ಕೆ ಕರೆಸಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು. “ಯಾವುದೇ ರೀತಿಯ ಕಳಪೆ ಕಾಮಗಾರಿ ಕಂಡುಬAದರೆ ಕ್ರಮ ಕೈಗೊಳ್ಳಲಾಗುತ್ತದೆ. ಆಸ್ಪತ್ರೆ ಕಟ್ಟಡವನ್ನು ಅಚ್ಚುಕಟ್ಟಾಗಿ, ಸರಿಯಾದ ಕ್ಯೂರಿಂಗ್ ಮೂಲಕ ಗುಣಮಟ್ಟದಿಂದ ನಿರ್ಮಿಸಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಸ್ತುತ ೫೦ ಹಾಸಿಗೆಗಳಿರುವ ಆಸ್ಪತ್ರೆಯನ್ನು ೧೦೦ ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ಸರ್ಕಾರದಿಂದ ಅನುದಾನ ದೊರಕದಿದ್ದರೂ, ಕೆಕೆಆರ್‌ಡಿಬಿ ಅನುದಾನದಿಂದ ನೆರವು ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.























