
ಶಿವಮೊಗ್ಗ,ಫೆ.೨೨-ವಸಂತ್ ನಾಯ್ಕ್ ಕೊಲೆ ಪ್ರಕರಣದ ಬಂಧಿತ ಆರೋಪಿ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ಈಗಾಗಲೇ ಸಿದ್ದಾಪುರದ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಕಮಲಾಕರ್ ಭಟ್ ವಿರುದ್ಧ ಮಹೇಶ್ ನಾಯ್ಕ್ ಪುತ್ರಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ.
ಮಹೇಶ್ ನಾಯ್ಕ್ ಪುತ್ರಿ ಸಿದ್ದಾಪುರ ಠಾಣೆಯಲ್ಲಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತು ದೂರು ನೀಡಿದ್ದಳು. ಈ ದೂರನ್ನು ಶಿವಮೊಗ್ಗ ತುಂಗಾನಗರ ಠಾಣೆಗೆ ವರ್ಗಾಯಿಸಲಾಗಿದ್ದು, ಶಿವಮೊಗ್ಗ ತುಂಗಾ ನಗರ ಠಾಣೆಯಲ್ಲಿ ಕಮಲಾಕರ್ ಭಟ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು ಮಾಡಲಾಗಿದೆ.
ದೂರು ನೀಡಿದ ಬಾಲಕಿ ಕಮಲಾಕರ್ ಭಟ್ ಶಿವಮೊಗ್ಗ ನಿವಾಸದಲ್ಲಿಯೇ ಇದ್ದು, ತಾಯಿ ಸುಚಿತ್ರಾ ಇಲ್ಲದ ಸಂದರ್ಭದಲ್ಲಿ ತನಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಮಾಡಿದ್ದಾಳೆ.
ಕಮಲಾಕರ್ ಭಟ್‌ರನ್ನ ಕಾರವಾರದ ಜೈಲಿನಿಂದ ಸಿದ್ದಾಪುರ ಠಾಣೆ ಪೊಲೀಸರು ತನಿಖೆಗೆ ಕರೆತಂದಿದ್ದು, ಪೋಕ್ಸೊ ಪ್ರಕರಣ ದಾಖಲಾದ ನಂತರ ಶಿವಮೊಗ್ಗಕ್ಕೆ ಕರೆದೊಯ್ಯುವ ಸಾಧ್ಯತೆಗಳಿವೆ.





























