ಪೊಲೀಸ್ ವರ‍್ಷಿಕ ಕ್ರೀಡಾಕೂಟಕ್ಕೆ ಚಾಲನೆ


ಹುಬ್ಬಳ್ಳಿ, ನ.೧೪: ಪೊಲೀಸರು ನಿತ್ಯ ಒತ್ತಡದಲ್ಲಿ ಕರ‍್ಯನರ‍್ವಹಿಸುತ್ತಾರೆ. ಕ್ರೀಡೆಯಿಂದ ಮನಸ್ಸು ಉಲ್ಲಾಸಗೊಳ್ಳುತ್ತದೆ. ಕ್ರೀಡೆಯಿಂದ ಉತ್ಸಾಹದಿಂದ ಕೆಲಸ ಕರ‍್ಯನರ‍್ವಹಿಸಲು ಸಹಾಯಕವಾಗಲಿದೆ. ಪೊಲೀಸರು ದೈಹಿಕ, ಮಾನಸಿಕ ಸದೃಢತೆಗೆ ಪ್ರಾಶಸ್ತ÷್ಯ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹೇಳಿದರು.


ಕಾರವಾರ ರಸ್ತೆಯ ಹಳೆಯ ಸಶಸ್ತç ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವರ‍್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪೊಲೀಸರು ಆರೋಗ್ಯದ ಕಡೆಗೆ ಗಮನಹರಿಸಬೇಕು. ಕಾಯಿಲೆಗಳನ್ನು ತಡೆಗಟ್ಟಲು ಕ್ರೀಡೆ ಸಹಾಯಕವಾಗುವುದು ಎಂದು ಅವರು ತಿಳಿಸಿದರು.
ಭಾರತೀಯ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಗಳಾದ ದೇವರಾಜ ಮಾತನಾಡಿ, ಪೊಲೀಸರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ತಮ್ಮ ವೃತ್ತಿಪರತೆ ಮೆರೆಯಲು ಕ್ರೀಡೆ ಅವಶ್ಯಕವಾಗಿದೆ. ದೈಹಿಕ ಪರಿಶ್ರಮ, ಕ್ರೀಡಾಕೂಟ ನಿರಂತರವಾಗಿ ನಡೆಯಬೇಕು. ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.


ಆರ್‌ಪಿಐ ಸಂತೋಷ ಬೋಜಪ್ಪನವರ ನೇತೃತ್ವದಲ್ಲಿ ಉತ್ತರ ವಿಭಾಗ, ದಕ?ಷಿಣ ವಿಭಾಗ, ಧಾರವಾಡ ವಿಭಾಗ, ಸಂಚಾರ ವಿಭಾಗ, ಮಹಿಳಾ ವಿಭಾಗ ಮತ್ತು ಸಿಎಆರ್ ವಿಭಾಗ ತಂಡಗಳು ಆರ‍್ಷಕ ಪಥ ಸಂಚಲನ ನಡೆಸಿದವು.


ಡಿಸಿಪಿ ರವೀಶ ಸಿ.ಆರ್., ಎಸಿಪಿ ಪ್ರಶಾಂತ ಸಿದ್ದನಗೌಡರ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಸರ‍್ವಜನಿಕರು ಇತರರು ಉಪಸ್ಥಿತರಿದ್ದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಸ್ವಾಗತಿಸಿದರು. ಡಿಸಿಪಿ