Home ಜಿಲ್ಲೆ ಕಲಬುರಗಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ

‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ

ಕಾಳಗಿ : ಫೆ.೧೧:ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಮಂಗಳವಾರ ಟೆಂಗಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಮಾತನಾಡಿ ಮನೆಬಾಗಿಲಿಗೆ ಪೊಲೀಸರು ಎನ್ನುವ ಪೊಲೀಸರ ಜನಸ್ನೇಹಿ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಮನೆ ಮನೆಗೆ ಪೊಲೀಸ್ ಎಂಬುದು ರಾಜ್ಯ ಸರ್ಕಾರದ ವಿನೂತನ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ಪೊಲೀಸರಿಂದ ಹೆಚ್ಚಿನ ಸೇವೆ ಈ ಮೂಲಕ ಜನರೆಡೆಗೆ ತಲುಪಲಿದೆ.
ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು.
ಸಿಪಿಐ ಜಗದೇವಪ್ಪ ಪಾಳಾ, ಪಿ ಎಸ್ ಐ ತಿಮ್ಮಯ್ಯ ಬಿ.ಕೆ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.