
ವಿಜಯಪುರ, ಅ.22: ಸಮಾಜದ ಸುರಕ್ಷತೆ ಹಾಗೂ ಶಾಂತಿಯುತ ವಾತಾವರಣ ನಿರ್ಮಾಣದಲ್ಲಿ ಪೆÇಲೀಸ್ ಸಿಬ್ಬಂದಿಯ ನಿಸ್ವಾರ್ಥ ಸೇವೆ ಮತ್ತು ತ್ಯಾಗ ಮಹತ್ವದ್ದಾಗಿದ್ದು, ಪೆÇಲೀಸ್-ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಶಾಂತಿಯುತ ಸಮಾಜ ನಿರ್ಮಿಸಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹರೀಶ್ ಹೇಳಿದರು.
ನಗರದ ಪೆÇಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೆÇಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ದೇಶದಾದ್ಯಂತ ಕಳೆದ ಒಂದು ವರ್ಷದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ 154 ಪೆÇಲೀಸ್ ಸಿಬ್ಬಂದಿಯ ಬಲಿದಾನವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಭಾರತೀಯ ಸಂವಿಧಾನ ನಾಗರಿಕರಿಗೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ನೀಡಿದೆ. ಹಕ್ಕುಗಳ ಬಗ್ಗೆ ಅರಿವು ಹೊಂದಿರುವಂತೆ ಕರ್ತವ್ಯಗಳ ಬಗ್ಗೆಯೂ ಜಾಗೃತಿ ಹೊಂದಬೇಕು. ಸಂವಿಧಾನದ ಆಶಯಗಳನ್ನು ಗೌರವಿಸುವುದು, ಕಾನೂನು ಪಾಲಿಸುವುದು ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯಾಗಿದೆ ಎಂದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವಲ್ಲಿ ಸಾರ್ವಜನಿಕರು ಪೆÇಲೀಸರೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಪೆÇಲೀಸರ ಕಾರ್ಯಕ್ಕೆ ಜಿಲ್ಲಾಧಿಕಾರಿ ಮೆಚ್ಚುಗೆ
ಜಿಲ್ಲಾಧಿಕಾರಿ ಡಾ. ಆನಂದ್.ಕೆ ಮಾತನಾಡಿ, ಸಮಸ್ಯೆ ಎದುರಾದಾಗ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸುವುದು ಪೆÇಲೀಸರ ಪ್ರಮುಖ ಜವಾಬ್ದಾರಿಯಾಗಿದೆ. ಪೆÇಲೀಸ್ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ದೈನಂದಿನ ಚಟುವಟಿಕೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಲು ಸಾಧ್ಯ ಎಂದರು.
ಅಪರಾಧ ನಡೆದ ಬಳಿಕ ಕ್ರಮ ಕೈಗೊಳ್ಳುವುದರ ಜತೆಗೆ ಅಪರಾಧ ತಡೆಗೆ ಮುನ್ನೆಚ್ಚರಿಕಾ ಕ್ರಮಗಳಿಗೂ ಪೆÇಲೀಸರು ಆದ್ಯತೆ ನೀಡುತ್ತಿದ್ದಾರೆ. ರಾತ್ರಿ ಗಸ್ತು, ಸಂಚಾರ ನಿಯಂತ್ರಣ ಹಾಗೂ ನಿರಂತರ ನಿಗಾ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ತವ್ಯದ ಕಾರಣದಿಂದ ಪೆÇಲೀಸರು ಹಬ್ಬ-ಹರಿದಿನಗಳು ಹಾಗೂ ಕುಟುಂಬದ ವಿಶೇಷ ಸಂದರ್ಭಗಳಲ್ಲಿಯೂ ಕುಟುಂಬದಿಂದ ದೂರವಿರಬೇಕಾಗುತ್ತದೆ. ಅವರ ಸೇವೆಯ ಹಿಂದೆ ನಿಂತಿರುವ ಕುಟುಂಬ ಸದಸ್ಯರ ತ್ಯಾಗ ಮತ್ತು ಕೊಡುಗೆಯನ್ನೂ ಸಮಾಜ ಗೌರವಿಸಬೇಕು ಎಂದರು.
ಹುತಾತ್ಮರ ತ್ಯಾಗ ಸ್ಫೂರ್ತಿದಾಯಕ
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, 1959ರ ಅ.21ರಂದು ಲಡಾಖ್ನ ಹಾಟ್ ಸ್ಪ್ರಿಂಗ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಪೆÇಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದ ವೀರರ ಸ್ಮರಣಾರ್ಥ ಪ್ರತಿವರ್ಷ ಅ.21ರಂದು ಪೆÇಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ದೇಶದ ಆಂತರಿಕ ಭದ್ರತೆ ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಪೆÇಲೀಸ್ ಸಿಬ್ಬಂದಿಯ ಶೌರ್ಯ, ತ್ಯಾಗ ಮತ್ತು ಕರ್ತವ್ಯನಿಷ್ಠೆ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಅವರ ಬಲಿದಾನವನ್ನು ಸದಾ ಸ್ಮರಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಜೂಫಿಶಾನ್ ಹಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ನಿವೃತ್ತ ಪೆÇಲೀಸ್ ಅಧಿಕಾರಿಗಳು ಮತ್ತು ಪೆÇಲೀಸ್ ಕುಟುಂಬಸ್ಥರು ಉಪಸ್ಥಿತರಿದ್ದರು.





















