Home ಜಿಲ್ಲೆ ಪೊಲೀಸ್ ನೇಮಕಾತಿ ಪರೀಕ್ಷೆ: ಜಮಖಂಡಿಯ ಪರೀಕ್ಷಾ ಕೇಂದ್ರಗಳಿಗೆ ಎಸ್‍ಪಿ ಸಿದ್ದಾರ್ಥ ಗೋಯಲ್ ಭೇಟಿ

ಪೊಲೀಸ್ ನೇಮಕಾತಿ ಪರೀಕ್ಷೆ: ಜಮಖಂಡಿಯ ಪರೀಕ್ಷಾ ಕೇಂದ್ರಗಳಿಗೆ ಎಸ್‍ಪಿ ಸಿದ್ದಾರ್ಥ ಗೋಯಲ್ ಭೇಟಿ

ಜಮಖಂಡಿ | ಆ. 2:
ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯ ನೇಮಕಾತಿ ಪರೀಕ್ಷೆ ಆಗಸ್ಟ್ 2ರಂದು ರಾಜ್ಯಾದ್ಯಂತ ನಡೆಯಲಿರುವ ಹಿನ್ನೆಲೆಯಲ್ಲಿ, ಜಮಖಂಡಿ ನಗರದಲ್ಲಿ ನೂತನವಾಗಿ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳಿಗೆ ಬಾಗಲಕೋಟೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೆÇಲೀಸ್ ನೇಮಕಾತಿ ಪರೀಕ್ಷೆಯನ್ನು ಸುಗಮ, ಶಿಸ್ತುಬದ್ಧ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಮಖಂಡಿ ನಗರದಲ್ಲಿ ಹಲವು ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಎಸ್‍ಪಿ ಸಿದ್ದಾರ್ಥ ಗೋಯಲ್ ಅವರು ಅಲ್ಲಿನ ಮೂಲಸೌಕರ್ಯ, ಪರೀಕ್ಷಾರ್ಥಿಗಳ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ, ಭದ್ರತಾ ಕ್ರಮಗಳು ಹಾಗೂ ಪೆÇಲೀಸ್ ಸಿಬ್ಬಂದಿ ನಿಯೋಜನೆ ಕುರಿತು ಪರಿಶೀಲಿಸಿದರು.
ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಂಬಂಧಪಟ್ಟ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್‍ಪಿ ಸಯ್ಯದ್ ರೋಷನ್ ಜಮೀರ್, ಸಿಪಿಐ ಮಲ್ಲಪ್ಪ ಮಡ್ಡಿ ಸೇರಿದಂತೆ ಜಮಖಂಡಿ ಉಪವಿಭಾಗದ ವಿವಿಧ ಠಾಣೆಗಳ ಸಿಪಿಐಗಳು, ಪಿಎಸ್‍ಐಗಳು ಹಾಗೂ ಪೆÇಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.