
ಕಲಬುರಗಿ,ಅ.14: ಮಂಗಳೂರಿನಲ್ಲಿ ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುತ್ತಿರುವುದನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲೆ ಪೆÇಲೀಸರು ಬಲಪ್ರಯೋಗ ನಡೆಸಿರುವುದನ್ನು ಬಿಜೆಪಿ ಯುವ ಮೋರ್ಚಾ ಹಾಗೂ ವಿದ್ಯಾರ್ಥಿ ಮುಖಂಡ ಶಿವ ಅಷ್ಟಗಿ ತೀವ್ರವಾಗಿ ಖಂಡಿಸಿದ್ದಾರೆ.
ಹಿಂದೂಗಳ ಪ್ರಮುಖ ಪವಿತ್ರ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ವಿಶ್ವವಿದ್ಯಾಲಯದ ನಿರ್ಧಾರವು ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳು, ಹಬ್ಬದ ಸಂಭ್ರಮ ಹಾಗೂ ಶೈಕ್ಷಣಿಕ ಹಿತಾಸಕ್ತಿಗಳನ್ನು ಪರಿಗಣಿಸದೆ ಕೈಗೊಂಡ ಕ್ರಮವಾಗಿದೆ.ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರವು ಪೆÇಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಮಹಿಳಾ ವಿದ್ಯಾರ್ಥಿನಿಯರೊಂದಿಗೆ ಪೆÇಲೀಸರು ಗೌರವ ಮತ್ತು ಕಾನೂನುಬದ್ಧ ರೀತಿಯಲ್ಲಿ ವರ್ತಿಸಬೇಕಿತ್ತು. ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಸಂವಾದದ ಮೂಲಕ ಬಗೆಹರಿಸುವ ಬದಲು ಬಲಪ್ರಯೋಗಕ್ಕೆ ಮುಂದಾಗಿರುವುದು ಖಂಡನೀಯ ಎಂದು ಶಿವ ಅಷ್ಟಗಿ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಗಂಭೀರ ಗಮನ ಹರಿಸುತ್ತಿಲ್ಲ. ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಆಡಳಿತಾತ್ಮಕ ಗೊಂದಲಗಳು, ಪರೀಕ್ಷಾ ವೇಳಾಪಟ್ಟಿಯ ಸಮಸ್ಯೆಗಳು ಹಾಗೂ ವಿವಿಧ ಕೋರ್ಸ್ಗಳ ಸ್ಥಗಿತದಂತಹ ಸಮಸ್ಯೆಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ಬದಲು ಪ್ರತಿಭಟನೆಗಳನ್ನು ಬಲಪ್ರಯೋಗದ ಮೂಲಕ ನಿಯಂತ್ರಿಸಲು ಪ್ರಯತ್ನಿಸುವುದು ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕು ಮತ್ತು ಭವಿಷ್ಯವನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.























