
ಬೆಂಗಳೂರು, ಅ.೨೫-ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವ ನ.೧ರಂದು ದೆಹಲಿಗೆ ತೆರಳಲಿದ್ದು, ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸ್ಟಿಂಗ್ ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಸಿದ್ದರಾಮಯ್ಯ ಜೊತೆ ಹಲವು ಶಾಸಕರು ಸಹ ದೆಹಲಿಗೆ ತೆರಳುತ್ತಿದ್ದು,ಇವರುಗಳ ದೆಹಲಿ ಭೇಟಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ದೆಹಲಿಯಲ್ಲಿ ನ.೧ರಂದು ಇಂಡಿಯಾ ಒಕ್ಕೂಟ ಎಸ್ಐಆರ್ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಅಗ್ರಹಿಸಿ ಬೃಹತ್ ಆಂದೋಲನವನ್ನು ಆಯೋಜಿಸಿದ್ದು,ಈ ಆಂದೋಲನದಲ್ಲಿ ಭಾಗಿಯಾಗಲು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ದೆಹಲಿಗೆ ಭೇಟಿ ಸೀಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದು,ನವೆಂಬರ್ ೨ ರಂದು ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.
ರಾಹುಲ್ ಅವರ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ವಿರುದ್ಧದ ಸ್ಟಿಂಗ್ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡುವ ಜೊತೆಗೆ ಇದರಿಂದ ಪಕ್ಷಕ್ಕೆ ಆಗಿರುವ ಮುಜುಗರ ಸೇರಿದಂತೆ ಎಲ್ಲ ವಿಚಾರವನ್ನು ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಲವು ಶಾಸಕರು ಸಹ ದೆಹಲಿಗೆ ತೆರಳುತ್ತಿದ್ದು, ಇವರುಗಳು ಸಹ ಹೈಕಮಾಂಡನ ಭೇಟಿ ಮಾಡಿ ರಾಜ್ಯದಲ್ಲಿನ ಪ್ರಶಕ್ತ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸುವರು ಎಂದು ಹೇಳಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಆಪ್ತ ಶಾಸಕರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ


























