Home ಕ್ರೈಂ ಸುದ್ದಿಗಳು ಜಮಖಂಡಿ ಸರ್ಕಾರಿ ಬಸ್ ನಿಲ್ದಾಣದ ಎಟಿಎಂನಲ್ಲಿ ಪವರ್ ಬ್ಯಾಂಕ್ ಬ್ಲಾಸ್ಟ್

ಜಮಖಂಡಿ ಸರ್ಕಾರಿ ಬಸ್ ನಿಲ್ದಾಣದ ಎಟಿಎಂನಲ್ಲಿ ಪವರ್ ಬ್ಯಾಂಕ್ ಬ್ಲಾಸ್ಟ್

ಜಮಖಂಡಿ: ಸರ್ಕಾರಿ ಸಾರಿಗೆ ಬಸ್ ನಿಲ್ದಾಣದ ಎಟಿಎಂನಲ್ಲಿ ಯುವಕನೊಬ್ಬನ ಜೇಬಿನಲ್ಲಿದ್ದ ಪವರ್ ಬ್ಯಾಂಕ್ ಏಕಾಏಕಿ ಬ್ಲಾಸ್ಟ್ ಆಗಿರುವ ಘಟನೆ ನಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪವರ್ ಬ್ಯಾಂಕ್ ಸ್ಫೋಟದಿಂದ ಯುವಕನ ತೊಡೆ ಭಾಗ ಹಾಗೂ ಎದೆ ಸಮೀಪ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಗೊಂಡ ಯುವಕನನ್ನು ಕುಬೇರಸಂದ್ರಿಯ ಸಿದ್ದು ಸಾಳೂಂಕೆ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಅವರನ್ನು ಚಿಕಿತ್ಸೆಗಾಗಿ ಜಮಖಂಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಎಟಿಎಂನಲ್ಲಿ ಪವರ್ ಬ್ಯಾಂಕ್ ಸ್ಫೋಟಗೊಂಡ ಘಟನೆ ಕೆಲಕಾಲ ಆತಂಕದ ವಾತಾವರಣಕ್ಕೆ ಕಾರಣವಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.