Home ಜಿಲ್ಲೆ ಬೆಂಗಳೂರು ಜನ ಸಾಮಾನ್ಯರ ಮನೆ ಬಾಗಿಲಿಗೆ ರಾಜ್ಯ ಸರ್ಕಾರ ಪ್ರಜಾಸೇವೆ ಆಂದೋಲನ

ಜನ ಸಾಮಾನ್ಯರ ಮನೆ ಬಾಗಿಲಿಗೆ ರಾಜ್ಯ ಸರ್ಕಾರ ಪ್ರಜಾಸೇವೆ ಆಂದೋಲನ

ಆನೇಕಲ್, ನ. ೨೨- ಹುಲಿಮಂಗಲ ಗ್ರಾಮ ಪಂಚಾಯಿತಿಯ ಎಸ್. ಬಿಂಗೀಪುರ ಗ್ರಾಮದ ಬಳಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾ ಸೇವೆ ಆಂದೋಲನ ಸಭೆಗೆ ಬೆಂ. ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ. ಕೃಷ್ಣಪ್ಪ ರವರು ಚಾಲನೆ ನೀಡಿದರು.


ಈ ವೇಳೆ ಬೆಂಗಳೂರು ನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಚ್ಚುತ್ ರಾಜ್ ರವರು ಮಾತನಾಡಿ, ರಾಜ್ಯ ಸರ್ಕಾರದ ವಿವಿಧ ಜನ ಕಲ್ಯಾಣ ಯೋಜನೆಗಳು ಹಾಗೂ ಅಗತ್ಯ ನಾಗರಿಕ ಸೇವೆಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ನೇರವಾಗಿ, ಸುಲಭವಾಗಿ ತಲುಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸರ್ಕಾರದ ಸೌಲಭ್ಯಗಳು ಪಾರದರ್ಶಕವಾಗಿ ಸಿಗಬೇಕು ಹಾಗೂ ಸಾರ್ವಜನಿಕರ ಕುಂದು ಕೊರತೆಗಳು ಒಂದೇ ವೇದಿಕೆಯಲ್ಲಿ ಪರಿಹಾರವಾಗಬೇಕು ಎಂಬ ಆಶಯವನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ’ಪ್ರಜಾಸೇವೆ’ ಆಂದೋಲನ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಸಿಗುವಂತಹ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ತಿಳಿಸಿದರು. ಇನ್ನು ಇದೇ ಸಂದರ್ಭದಲ್ಲಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಚುನಾಯಿತ ಸದಸ್ಯರು ಹಾಗೂ ಅಧಿಕಾರಿಗಳು ವಿತರಣೆ ಮಾಡಿದರು.


ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಜಿಲ್ಲಾಧಿಕಾರಿ ಕಾಂತರಾಜ್, ಎಸಿ. ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಸಿಒ ಯತೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಆನೇಕಲ್ ತಾಲ್ಲೂಕು ಅಧ್ಯಕ್ಷರಾದ ಪುರುಷೋತ್ತಮ್ ರೆಡ್ಡಿ, ತಹಶೀಲ್ದಾರ್ ಬಿ.ಆರ್. ವೆಂಕಟಪ್ಪ, ಹುಲಿಮಂಗಲ ಗ್ರಾಮ ಪಂಚಾಯಿತಿ ಪಿಡಿಓ ಕೃಷ್ಣಪ್ಪ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿಭಾಗದ ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.