Home ಜಿಲ್ಲೆ ಮೇ ೧೮ರಂದು ಎಸ್ಸೆಸ್ಸೆಲ್ಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರಸಾಧಕ ಪತ್ರಕರ್ತರಿಗೆ ಗೌರವ ಸನ್ಮಾನ

ಮೇ ೧೮ರಂದು ಎಸ್ಸೆಸ್ಸೆಲ್ಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರಸಾಧಕ ಪತ್ರಕರ್ತರಿಗೆ ಗೌರವ ಸನ್ಮಾನ

ಯಾದಗಿರಿ:ಮೇ.೧೭:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡ ಸಾಧಕ ಪತ್ರಕರ್ತರಿಗೆ ಸನ್ಮಾನ ಹಾಗೂ ಸಂಘದ ಸರ್ವ ಸದಸ್ಯರ ಸಭೆಯನ್ನು ಮೇ ೧೮ರಂದು ಜಿಲ್ಲಾ ಮಟ್ಟದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಯಾದಗಿರಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಲಿದ್ದು, ಶಾಸಕ ಶರಣಗೌಡ ಕಂದಕೂರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶ್ರೇಣಿಕುಮಾರ ಧೋಕಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಧರ್ ಸಾಹುಕಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅಧ್ಯಕ್ಷತೆ ವಹಿಸಲಿದ್ದು, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸಾಗರ್ ದೇಸಾಯಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

೯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ

೨೦೨೫-೨೬ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ನೀಡಿ ಸನ್ಮಾನಿಸಲಾಗುತ್ತದೆ.

ಯಶೋಧಾ ಚಂದ್ರು ನಾರಾಯಣಪುರ, ರಿಷಿಕಾ ರಾಘವೇಂದ್ರ ಸೈದಾಪುರ, ವರುಣ ಮಹೇಶ ಕಲಾಲ, ಮುತ್ತುರಾಜ್ ರವಿರಾಜ್ ಕಂದಳ್ಳಿ, ಭಾರ್ಗವ ಭೀಮಸೇನರಾವ ಕುಲಕರ್ಣಿ, ಇಕ್ರಾ ಶಹಜಿಯಾ ಖಾಜಾ ಕಲೀಮುದ್ದೀನ್ ಫರೀದಿ (ಸುರಪುರ), ಸಾಯಿಸುಜಲ ಮಲ್ಲಿಕಾರ್ಜುನ ಮುದ್ನೂರ (ಶಹಾಪುರ), ಸಂಗೀತಾ ಶಿವಣ್ಣ ಚಿನ್ನಾಕಾರ ಬೂದಿಹಾಳ ಹಾಗೂ ಹರ್ಷಿತ್ ರಾಠಿ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಐವರು ಸಾಧಕ ಪತ್ರಕರ್ತರಿಗೆ ಗೌರವ ಸನ್ಮಾನ

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದಿರುವ ಹಿರಿಯ ಪತ್ರಕರ್ತರಾದ ಅಮರೇಶ ಹಿರೇಮಠ, ಟಿ. ನಾಗೇಂದ್ರ, ಸಂಜೀವರಾವ್ ಕುಲಕರ್ಣಿ, ಮಲ್ಲಯ್ಯ ಪೋಲಂಪಲ್ಲಿ ಹಾಗೂ ಬಸವರಾಜ ಕಟ್ಟಿಮನಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಪ್ರತಿಭಾ ಪುರಸ್ಕಾರ ಸಮಾರಂಭದ ಬಳಿಕ ಸಂಘದ ಸರ್ವ ಸದಸ್ಯರ ಸಭೆ ನಡೆಯಲಿದ್ದು, ೨೦೨೪-೨೫ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ. ಜಿಲ್ಲೆಯ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷರು ಮನವಿ ಮಾಡಿದ್ದಾರೆ.