ಔರಾದ್ : ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ತುಳಸಿರಾಮ ಪಾಂಚಾಳ ಹೇಳಿದರು.
ಸೋಮವಾರ ತಾಲೂಕಿನ ಗುಡಪಳ್ಳಿ ಗ್ರಾಮದಲ್ಲಿ ಜರುಗಿದ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಅಂಕಗಳ ಜತೆಗೆ ಜೀವನ ಮೌಲ್ಯಗಳು, ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗಿದೆ. ಮಕ್ಕಳ ಪ್ರತಿಭೆಗೆ ಶಿಕ್ಷಕರು,ಪೋಷಕರು ಮಾರ್ಗದರ್ಶನ ನೀಡುವ ಮೂಲಕ ಮಕ್ಕಳ ಯಶಸ್ಸಿಗೆ ಮುಂದಾಗಬೇಕು ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಂಡರಿ ಆಡೆ ಮಾತನಾಡಿ , ಮಗುವಿನಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಮತ್ತು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಹೊರ ತಂದಿರುವ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳು ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಹಕಾರಿಯಾಗಿದೆ ಎಂದು ಹೇಳಿದರು.
ಸಿಆರ್‌ಪಿ ಶಿವಾನಂದ ಸ್ವಾಮಿ ಮಾತನಾಡಿ ಮಕ್ಕಳಲ್ಲಿನ ಪ್ರತಿಭಾನ್ವೇಷಣೆ ಹಾಗೂ ನಾಯಕತ್ವ ಗುಣ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದರು.
ಇದೇ ವೇಳೆ ಶಾಲಾ ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ವೇದಿಕೆಯಲ್ಲಿ ಪ್ರಸ್ತುತಪಡಿಸಿ ತಮ್ಮ ಗಮನ ಸೆಳೆದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಪಿಂಕು ಬಾಯಿ, ಮುಖ್ಯ ಗುರು ವಿಜಯ ಕುಮಾರ್ ನಿಟ್ಟೂರೆ, ಪ್ರದೀಪ, ಶ್ರೀದೇವಿ ಹೂಗಾರ್, ಸಮೃತ್ತ್ ಸೂರ್ಯವಂಶಿ, ದುಶ್ಯಂತ ಸೇರಿದಂತೆ ಇನ್ನಿತರರಿದ್ದರು.























