
ಅಥಣಿ :ಡಿ.7: ಮಕ್ಕಳ ಪ್ರತಿಭೆಯನ್ನು ಅರಳಿಸುವ ವೇದಿಕೆ ಪ್ರತಿಭಾ ಕಾರಂಜಿ. ವಿದ್ಯಾರ್ಥಿಗಳು ತಮ್ಮಲ್ಲಿ ಅಡಕವಾಗಿರುವ ಕಲೆಯನ್ನು ಪ್ರದರ್ಶಿಸಿ ಅದರಲ್ಲಿ ಯಶಸ್ಸು ಸಾಧಿಸಿ ಜಿಲ್ಲಾ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ನಮ್ಮ ಊರಿನ ಕೀರ್ತಿ ಹೆಚ್ಚಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು
ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಥಣಿ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ರಾಯಲ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರಗೆ ತರಲು ಮತ್ತು ಅವರನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಗುರುತಿಸಲು ಪ್ರತಿಭಾಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದರು.
ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಹೆಚ್ಚಿನ ಒತ್ತು ನೀಡಲಾಗಿದ್ದು
ಈಗಾಗಲೇ ಸರ್ಕಾರವು 9 ಹೊಸ
ಪ್ರೌಢಶಾಲೆಗಳನ್ನು ಮಂಜೂರು ಮಾಡಿದೆ ಮತ್ತು ಅವುಗಳ ಪ್ರತಿಯೊಂದು ಶಾಲೆಗೆ ಕೊಠಡಿಗಳನ್ನು ನಿರ್ಮಾಣ ಮಾಡುವ ಕೆಲಸ ಆರಂಭವಾಗಿದೆ. ಅಷ್ಟೇ ಅಲ್ಲದೆ 1 ನೇ ತರಗತಿಯಿಂದ 12 ನೆ ತರಗತಿ ವರೆಗೆ ಇಂಗ್ಲಿಷ್ 3 ಕೆ.ಪಿ.ಎಸ್.ಸಿ ಮಾದರಿ ಶಾಲೆಗಳನ್ನು ಮಂಜೂರು ಮಾಡಿಸಿಕೊಂಡು ನಮ್ಮ ತಾಲೂಕಿನಲ್ಲಿ ಪ್ರಾರಂಭ ಮಾಡುತ್ತೇನೆ. ಜೊತೆಗೆ ನಾನು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ದ್ವಿ-ಭಾಷಾ ನೀತಿ ಬದಲಿಗೆ ತ್ರಿ-ಭಾಷಾ ನೀತಿಯನ್ನು ಜಾರಿಗೊಳಿಸುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಅಥಣಿ ತಾಲೂಕು ಎಲ್ಲ ರೀತಿಯಲ್ಲಿ ಅಭಿವೃದ್ಧಿ ಹೊಂದಿದನ್ನು ನೋಡಿ ಪಕ್ಕದ ಮಹಾರಾಷ್ಟ್ರದ ಜತ್ತ ತಾಲೂಕಿನ ಗಡಿ ಭಾಗದ ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ತಮ್ಮ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದೆ. ಬೆಳಗಾವಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಥಣಿ ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಎಲ್ಲ ಶಿಕ್ಷಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಈ ಸಂದರ್ಭದಲ್ಲಿ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ನ್ಯಾಯವಾದಿ ಅಮೋಘಸಿದ್ದ ಕೊಬ್ರಿ, ಮಾತನಾಡಿ ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಯನ್ನು ಜಗತ್ತಿಗೆ ಪರಿಚಯಿಸುವ ಉತ್ತಮ ವೇದಿಕೆಯಾಗಿದೆ. ರೈತರು ತಾವು ಬೆಳೆದ ಬೆಳೆಗಳನ್ನು ಯಾವ ರೀತಿ ಸೂಕ್ಷ್ಮವಾಗಿ ಪೆÇೀಷಿಸಿ ಬೆಳೆಸುತ್ತೀರಿ ಅದೆ ರೀತಿ ಪಾಲಕರು ಮತ್ತು ಶಿಕ್ಷಕರು ಮಕ್ಕಳನ್ನು ಸೂಕ್ಷ್ಮವಾಗಿ ಬೆಳೆಸಬೇಕು” ಎಂದರು. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಬರಲು ಕಲೆ, ಸಾಹಿತ್ಯ ಮತ್ತು ಸಾಂಸ್ಕøತಿಕ ಜ್ಞಾನ ಅಗತ್ಯ. ದೇಶದ ಆಸ್ತಿಯನ್ನಾಗಿ ಮಕ್ಕಳನ್ನು ರೂಪಿಸುವುದು ಶಿಕ್ಷಕರು ಮತ್ತು ಪಾಲಕರ ಕರ್ತವ್ಯ. ಪಾಲಕರು ಮಕ್ಕಳ ವಿದ್ಯಾಭ್ಯಾಸ ಮತ್ತು ನಡತೆಗಳ ಮೇಲೆ ಹೆಚ್ಚು ಗಮನ ಹರಿಸಬೇಕು ಹಾಗೂ ಅವರನ್ನು ಮೊಬೈಲ್‍ಗಳಿಂದ ದೂರವಿಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.
ಆರ್. ಮುಂಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ ಯಾಗಿದೆ. ಮಕ್ಕಳ ಪ್ರತಿಭೆಗೆ ಪೆÇ್ರೀತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರದಲ್ಲಿ ವಿದ್ಯಾರ್ಥಿಗಳು ಸೋಲು ಗೆಲುವು ಎನ್ನದೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಇಂತಹ ಕಾರ್ಯಕ್ರಮದಿಂದ ವೇದಿಕೆಯ ಭಯ ಹೋಗಲಾಡಿಸಲು, ನಾಯಕತ್ವದ ಗುಣ, ಧೈರ್ಯಬೆಳೆಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು.
ಈ ವೇಳೆ ರಾಯಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್ ಎಂ ಡಾಂಗೆ. ಶಿವಶಂಕರ ಹಂಜಿ.
ಜಿ. ಎಂ. ಹಿರೇಮಠ, ಗಜಾನನ ಗಸ್ತಿ, ಎಂ. ವಿ. ನಾಮದಾರ, ಎನ್. ಬಿ. ಕರೋಶಿ, ಎಸ್. ಬಿ. ತೇಲಿ, ಎಸ್. ವೈ. ಗಸ್ತಿ, ನೋಡೆಲ್ ಅಧಿಕಾರಿ ಎಸ್. ವೈ. ಹುಡೇದಾರ. ಶ್ರೀಶೈಲ ಜಂಬಗಿ. ಅಶೋಕ ಪೂಜಾರಿ. ಸಿ ಎಂ ಕಾಂಬಳೆ. ಮುಂತಾದ ಗಣ್ಯರು ಹಾಗೂ ಶಿಕ್ಷಕರು ಮತ್ತು ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವ್ಹಿ ಪಿ ಮಾಳಿ. ನಿರೂಪಿಸಿದರು. ಅಣ್ಣಪ್ಪ ಹೈಬತ್ತಿ ವಂದಿಸಿದರು.
#
ತಾಲೂಕನ್ನು ಮಾದರಿ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ಆಶಯವನ್ನು ಹೊಂದಿದ್ದೇನೆ.ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈಗಾಗಲೇ 9 ಪ್ರೌಢಶಾಲೆಗಳು. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಮೌಲಾನ ಆಜಾದ್ ಮಾದರಿ ಶಾಲೆ ಆರಂಭಿಸಲಾಗಿದೆ ಹಾಗೂ ಶೀಘ್ರದಲ್ಲೇ ಕೇಂದ್ರಿಯ ವಿದ್ಯಾಲಯ ಕೂಡಾ ಆರಂಭಿಸಲಾಗುವುದು. ಸರಕಾರಿ ಶಾಲೆಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರಕಾರ ಕಲ್ಪಿಸುತ್ತಿದೆ. ಜತೆಗೆ ವಿದ್ಯಾರ್ಥಿಗಳಿಗೂ ಕೂಡ ನಾನಾ ಸವಲತ್ತುಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಲಕ್ಷ್ಮಣ ಸವದಿ. ಶಾಸಕ























