ಪರಮೇಶ್ವರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ

ಕೊರಟಗೆರೆ, ಜ. ೩- ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿ ನೂರಾರು ಕೈ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೆಂಬಲಿಗರು ತಾಲ್ಲೂಕಿನ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ೧೦೮ ತೆಂಗಿನ ಕಾಯಿ ಈಡುಗಾಯಿ ಒಡೆದು ಪೂಜೆ
ಸಲ್ಲಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್ ಮಾತನಾಡಿ, ಜಿ.ಪರಮೇಶ್ವರ್ ಎಂಟು ವರ್ಷ ಕೆಪಿಸಿಸಿ ಅದ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ೨೦೧೩ರಲ್ಲಿ ಮತ್ತು ೨೦೧೮ ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದಾರೆ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಿಲ್ಲ. ಈಗ ಸಿದ್ದಾರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಬದಲಾದರೆ ಡಾ. ಜಿ. ಪರಮೇಶ್ವರ್ ಅವರನ್ನೇ ಮುಖ್ಯಮಂತ್ರಿ ಮಾಡುವಂತೆ ಒತ್ತಾಯಿಸುತ್ತೇವೆ ಎಂದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕರೆ ಶಂಕರ್ ಮಾತನಾಡಿ, ಡಾ. ಜಿ. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇದೆ. ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಎ.ಡಿ.ಬಲರಾಮಯ್ಯ, ಮಹಿಳಾ ಅಧ್ಯಕ್ಷೆ ಜಯಮ್ಮ, ಎಚ್.ಕೆ.ಮಹಾಲಿಂಗಪ್ಪ, ಕೆ.ಆರ್.ಓಬಳರಾಜು, ಹೊಳವನಹಳ್ಳಿ ಜಯರಾಮ್, ಎಲ್.ರಾಜಣ್ಣ, ಟಿ.ಸಿ.ರಾಮಯ್ಯ, ಉಮಾಶಂಕರ್, ವಿನಯ್ ಕುಮಾರ್, ಮಹೇಶ್, ಗೋಟು ಉಮೇಶ್, ನಾರಾಯಣಪ್ಪ, ವೆಂಕಟಪ್ಪ, ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.