
ಕಲಬುರಗಿ,ಜೂ.20-ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಎಸ್‍ಐಆರ್ ವಿಭಾಗವಾರು ಜಾಗೃತ ಸಮಾವೇಶ ಕುರಿತು ಪೂರ್ವಭಾವಿ ಸಭೆಯನ್ನು ಜೂ.22 ರಂದು ಬೆಳಿಗ್ಗೆ 11 ಗಂಟೆಗೆ ಕರೆಲಾಗಿದೆ.
ಕಲಬುರಗಿ ವಿಭಾಗ ಮಟ್ಟದ ಎಸ್‍ಐಆರ್ ಜಾಗೃತ ಸಮಾವೇಶಯು ಕಲಬುರಗಿ ನಗರದಲ್ಲಿ ಜೂ.29 ರಂದು ಹಮ್ಮಿಕೊಳ್ಳಲಾಗಿದ್ದು ಸದರಿ ವಿಷಯದ ಕುರಿತು ಈ ಪೂರ್ವಭಾವಿ ಸಭೆಯನ್ನು ಕರೆಲಾಗಿದೆ.
ಈ ಜಾಗೃತಿ ಸಮಾವೇಶದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಅನೇಕ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.
ಈ ಪೂರ್ವಭಾವಿ ಸಭೆಗೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು, ಲೋಕಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲಾ ಮುಂಚೂಣಿ ಘಟಕ/ವಿಭಾಗ/ಸೆಲ್‍ಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ಹಾಲಿ ಹಾಗೂ ಮಾಜಿ ಎಲ್ಲಾ ಚುನಾಯಿತ ಸದಸ್ಯರುಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಈ ಪೂರ್ವಭಾವಿ ಸಭೆಗೆ ಆಗಮಿಸಬೇಕಾಗಿ ಕೋರಲಾಗಿದೆ.
ಅದೇ ರೀತಿ ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮುಂಚೂಣಿ ಘಟಕ/ವಿಭಾಗ/ಸೆಲ್ ಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಹಾಗೂ ತಾಲ್ಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರುಗಳು ತಮ್ಮ ಪದಾಧಿಕಾರಿಗಳಿಗೆ ಈ ಪೂರ್ವಭಾವಿ ಸಭೆಯ ವಿಷಯ ತಿಳಿಸಿ ತಮ್ಮ ತಮ್ಮ ಪದಾಧಿಕಾರಿಗಳನ್ನು ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕರೆದುಕೊಂಡು ಬರಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























