
ಧಾರವಾಡ, ಸೆ.೧೦: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಸೆ. ೧೭, ೨೦೨೬ ರಂದು ಬೆಳಿಗ್ಗೆ ೧೨ ಗಂಟೆಗೆ ಭಗವಾನ ಶ್ರೀ ವಿಶ್ವಕರ್ಮ ಜಯಂತಿ ದಿನಾಚರಣೆಯನ್ನು ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ನಿಯಮಾವಳಿಗಳ ಅನುಸಾರ ಜಯಂತಿಗಳನ್ನು ಆಚರಿಸಲಾಗುವುದು ಎಂದು ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ವಿಶ್ವಕರ್ಮ ನಿಗಮದ ಅಧಿಕಾರಿಗಳು ಹಾಗೂ ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.































