Home ಜಿಲ್ಲೆ ಪ್ರಾಥಮಿಕ ಪ್ರೌಢಶಾಲೆಗಳ ಕ್ರೀಡಾಕೂಟ ಪೂರ್ವಭಾವಿ ಸಭೆ

ಪ್ರಾಥಮಿಕ ಪ್ರೌಢಶಾಲೆಗಳ ಕ್ರೀಡಾಕೂಟ ಪೂರ್ವಭಾವಿ ಸಭೆ


ನವಲಗುಂದ,ಜೂ.೨೯: ಶೈಕ್ಷಣಿಕ ಪ್ರಗತಿಯಲ್ಲಿ ದೈಹಿಕ ಶಿಕ್ಷಣದ ಜೊತೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕ್ರೀಡಾ ಚಟುವಟಿಕೆಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಸರಿಸುತ್ತ ಅವುಗಳಿಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ್ ನಾಗಪ್ಪ ಕಾಂಬೋಗಿ ಸೂಚಿಸಿದರು.


ತಾಲ್ಲೂಕಿನ ಚೀಲಖವಾಡ ಗ್ರಾಮದ ಶ್ರೀ ಎಚ್ ಕೆ ಮತ್ತು ಜಿಕೆ ಕೋನ್ ರೆಡ್ಡಿ ಸರ್ಕಾರಿ ಪ್ರೌಢಶಾಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ೨೦೨೬ – ೨೭ ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.


ಈ ವರ್ಷ ಬೆಳಗಾವಿ ವಿಭಾಗ ಮಟ್ಟದ ೧೪ ಮತ್ತು ೧೭ ವರ್ಷದ ಒಳಗಿನ ಬಾಲಕ ಬಾಲಕಿಯರ ಕಬಡ್ಡಿ ಕ್ರೀಡಾಕೂಟವನ್ನು ಆಯೋಜಿಸುವ ಜವಾಬ್ದಾರಿ ಧಾರವಾಡ ಜಿಲ್ಲೆಗೆ ಬಂದಿದ್ದು ಅದನ್ನು ನವಲಗುಂದ ತಾಲ್ಲೂಕಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. .


ಮುಖ್ಯೋಪಾಧ್ಯಾಯರಾದ ವೆಂಕಟೇಶ್ ಎನ್ ಬೋವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪ್ರಭಾರಿ ದೈಹಿಕ ಶಿಕ್ಷಣ ಪರಿವೀಕ್ಷ ಎನ್ ವಿ ಕುರುವತ್ತಿಮಠ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಎಚ್ ನೇಗಲಿ, ಸುರೇಶ್ ಗಾಣಿಗೇರ, ಮಾಲತಿ ಹೂಗಾರ, ಎಲ್ ವೈ ರಾಯಪ್ಪನವರ ಸೇರಿ ೫೪ ಜನ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಿದ್ದರು.