Home ಜಿಲ್ಲೆ ಪೂರ್ವಭಾವಿ ಸಭೆ

ಪೂರ್ವಭಾವಿ ಸಭೆ

ಗದಗ,ಸೆ೩: ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಡಿ ಸೆಪ್ಟೆಂಬರ್ ೦೫ ರಂದು ಮನೆ ಬಾಗಿಲಿಗೆ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆಯಲಿರುವ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ, ಸಾರ್ವಜನಿಕರ ಕುಂದು ಕೊರತೆಗಳಿಗೆ ತ್ವರಿತ ಇತ್ಯರ್ಥಕ್ಕೆ ಹಾಗೂ ಗುಣಮಟ್ಟದ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಿದ್ಧತೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಿಗದಿತ ಸಮಯಕ್ಕೆ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸಭೆಗಳ ನೇರ ಪ್ರಸಾರ (ಲೈವ್ ಸ್ಟಿçÃಮಿಂಗ್) ವ್ಯವಸ್ಥೆಯನ್ನು ಮುಖ್ಯಮಂತ್ರಿಗಳ ಕಚೇರಿಗೆ (ಅಒಔ) ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದರು.

ಸೆಪ್ಟೆಂಬರ್ ೫ರಿಂದ ಪ್ರಜಾಸೇವೆ ‘ಅಭಿಯಾನ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಸೇವೆಗೆ ಇರಲಿ ನಿಮ್ಮ ಸಹಕಾರ ಪ್ರತಿ ಶನಿವಾರ ಬೆಳಿಗ್ಗೆ ೧೦ ರಿಂದ ಸಂಜೆಯವರೆಗೆ ತಾಲೂಕು/ ಹೋಬಳಿ ಮಟ್ಟದಲ್ಲಿ ಅಭಿಯಾನದ ಸಭೆಗಳು ನಡೆಯಲಿವೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳ ೧ನೇ ಮತ್ತು ೩ನೇ ಶನಿವಾರ, ಸ್ಥಳೀಯ ಶಾಸಕರ ನೇತೃತ್ವದಲ್ಲಿ ೨ನೇ ಮತ್ತು ೪ನೇ ಶನಿವಾರ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಮನೆ-ಮನೆಗೆ ತೆರಳಿ ಅರ್ಜಿಗಳ ಕುರಿತು ಜಾಗೃತಿ ಮೂಡಿಸಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ ಸಲ್ಲಿಸಲು ಅನುಕೂಲವಾಗುವಂತೆ ನಿಗದಿತ ಅರ್ಜಿ ನಮೂನೆಗಳನ್ನು ಮನೆ-ಮನೆಗೆ ತಲುಪಿಸಬೇಕು. ಸಭೆಗೆ ಆಗಮಿಸುವಾಗಲೇ ಅರ್ಜಿಗಳನ್ನು ಭರ್ತಿ ಮಾಡಿಕೊಂಡು ತರಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.