
ಕೊಲ್ಕತ್ತಾ, ಮೇ ೬- ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿರುವ ಟಿಎಂಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮುಖ್ಯಮಂತ್ರಿ
ಹುದ್ದೆಗೆ ರಾಜೀನಾಮೆ ನೀಡಲು ನಿರಾಕರಿಸಿರುವ ಹಿನ್ನೆಲೆ ಯಲ್ಲಿ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾ ಮಾಡುವ ಸಾಧ್ಯತೆಗಳು ಇವೆ. ಈಎಲ್ಲಾ ಬೆಳವಣಿಗೆ ನಡುವೆಯೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚನೆಯ ಹಕ್ಕು ಮಂಡಿಸಿ ನೂತನ ಮುಖ್ಯಮಂತ್ರಿ ಆಯ್ಕೆಗೆ ಪ್ರಕ್ರಿಯೆಗಳನ್ನು ಆರಂಭಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಿತೂರಿ ನಡೆದಿದೆ. ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ.
ಸಂವಿಧಾನದ ಪ್ರಕಾರ ಬಹುಮತ ಕಳೆದುಕೊಂಡವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವಂತಿಲ್ಲ. ಹಾಗಾಗಿ ರಾಜ್ಯಪಾಲರಿಗೆ ಬಹುಮತ ಕಳೆದುಕೊಂಡ ಮುಖ್ಯಮಂತ್ರಿ ವಜಾ ಮಾಡಲು ಅವಕಾಶವಿದೆ. ಕಾನೂನನ್ನು ಬಳಸಿಕೊಂಡು ಪಶ್ಚಿಮ ಬಂಗಾಳದ ರಾಜ್ಯಪಾಲರು ಮಮತಾ ಬ್ಯಾನರ್ಜಿಯವರನ್ನು ವಜಾ ಮಾಡುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಆಯ್ಕೆ ಕಸರತ್ತು
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ೨೦೬ ಸ್ಥಾನ ಗೆದ್ದು ಬೀಗಿರುವ ಬಿಜೆಪಿ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಯನ್ನು ಆರಂಭಿಸಿದ್ದು, ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿಯ ಕೇಂದ್ರ ನಾಯಕತ್ವ ಗೃಹ ಸಚಿವ ಅಮಿತ್ ಶಾ ಅವರನ್ನು ವೀಕ್ಷಕರನ್ನಾಗಿ ಹಾಗೂ ಒರಿಸ್ಸಾದ ಮುಖ್ಯಮಂತ್ರಿ ಮೋಹನ್‌ಚರಣ್ ಮಾಝಿ ಅವರನ್ನು ಸಹ ವೀಕ್ಷಕರನ್ನಾಗಿ ನೇಮಕ ಮಾಡಿದ್ದು ಈ ಇಬ್ಬರು ನಾಯಕರು ಕೊಲ್ಕತ್ತಾಗೆ ಆಗಮಿಸಿದ್ದು ನೂತನ ಮುಖ್ಯಮಂತ್ರಿಯ ಆಯ್ಕೆ ಬಗ್ಗೆ ಬಿಜೆಪಿ ಶಾಸಕರು ಹಾಗೂ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಮಾಲೋಚನೆ ನಡೆಸಿದ್ದು, ಇಂದು ಇಲ್ಲವೇ ನಾಳೆಯೊಳಗೆ ನೂತನ ಮುಖ್ಯಮಂತ್ರಿ ಪೂರ್ಣಗೊಳ್ಳಲಿದೆ.
ಇದಾದ ಬಳಿಕ ಮೇ ೯ ರಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುವರು.

























