ಗಣರಾಜ್ಯೋತ್ಸವ ದಿನಾಚರಣೆಗೆ ತಯಾರಿ

ಕೋಲಾರ, ಜ,೨೩-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೋಲಾರ ಇವರ ಸಹಯೋಗದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ಜನವರಿ ೨೬ ರಂದು ಬೆಳಗ್ಗೆ ೯.೦೦ ಗಂಟೆಗೆ ಕೋಲಾರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ನೆರವೇರಿಸುವರು. ನೂತನ ಕಟ್ಟಡದ ಉದ್ಘಾಟನೆಯನ್ನು ಸನ್ಮಾನ್ಯ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಕೊತ್ತೂರು ಜಿ.ಮಂಜುನಾಥ್ ಅವರು ವಹಿಸುವರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರು ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರು ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ, ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ರೂಪಕಲಾ ಎಂ.ಶಶಿಧರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ.ಮಲ್ಲೇಶ್ ಬಾಬು, ಕೋಚಿಮುಲ್ ಅಧ್ಯಕ್ಷರು ಮತ್ತು ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಕೆ ವೆಂಕಟಶಿವಾರೆಡ್ಡಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್. ವಿಧಾನ ಪರಿಷತ್ ಶಾಸಕರಾದ ಇಂಚರ ಗೋವಿಂದರಾಜು, ಚಿದಾನಂದ ಎಂ.ಗೌಡ, ಎಂ.ಎಲ್ ಅನಿಲ್ ಕುಮಾರ್, ಡಾ|| ಡಿ.ಟಿ. ಶ್ರೀನಿವಾಸ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ವೈ.ಶಿವಕುಮಾರ್ ಅವರು ಭಾಗವಹಿಸುವರು.