Home ಜಿಲ್ಲೆ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ಧಾರವಾಡ,ಆ೨೧: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಗಸ್ಟ್ ೨೮ ರಂದು ಮಧ್ಯಾಹ್ನ ೧ ಗಂಟೆಗೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಮಧ್ಯಾಹ್ನ ೩ ಗಂಟೆಗೆ ಶ್ರೀ ನುಲಿಯ ಚಂದಯ್ಯ ಜಯಂತಿ ಮತ್ತು ಸಪ್ಟೆಂಬರ್ ೪ ರಂದು ಬೆಳಿಗ್ಗೆ ೧೧ ಗಂಟೆಗೆ ಭಗವಾನ ಶ್ರೀಕೃಷ್ಣ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.


ಅವರು ಇಂದು (ಅ.೨೦) ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಜಯಂತಿಗಳ ಪ್ರಯುಕ್ತ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ವಿವಿಧ ಸಮಾಜದ ಹಿರಿಯ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.