Home ಜಿಲ್ಲೆ ಕಲಬುರಗಿ ಶ್ರೇಷ್ಠ ವಿದ್ಯಾಲಯ, ಶಿಕ್ಷಕ ಹಾಗೂ ಬೋಧಕೇತರ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ

ಶ್ರೇಷ್ಠ ವಿದ್ಯಾಲಯ, ಶಿಕ್ಷಕ ಹಾಗೂ ಬೋಧಕೇತರ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ: ನೂತನ ವಿದ್ಯಾಲಯ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶ್ರೇಷ್ಠ ವಿದ್ಯಾಲಯ, ಶ್ರೇಷ್ಠ ಶಿಕ್ಷಕ ಸೇರಿದಂತೆ ವಿವಿಧ ಪ್ರಶಸ್ತಿಗಳ ಪ್ರದಾನ ಹಾಗೂ ಸಂಸ್ಥೆಯ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ನಗರದ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ಶ್ರೀ ಅನಂತರಾವ ದೇಶಮುಖ ಸಭಾಗೃಹದಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶ್ರೀಮತಿ ಗಂಗಾಬಾಯಿ ಹಾಗೂ ಶ್ರೀ ಅಡವಿರಾವ ಸಿದ್ದಾಪೂರ ಅವರ ಸ್ಮರಣಾರ್ಥ ಶ್ರೇಷ್ಠ ವಿದ್ಯಾಲಯ ಪ್ರಶಸ್ತಿ ಹಾಗೂ ಶ್ರೀ ವೆಂಕಟರಾವ ಮಾನ್ವಿಕರ ಅವರ ಸ್ಮರಣಾರ್ಥ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ನೂತನ ವಿದ್ಯಾಲಯ ಸಂಸ್ಥೆ ವತಿಯಿಂದ ಶ್ರೇಷ್ಠ ದೈಹಿಕ ಶಿಕ್ಷಣ ಶಿಕ್ಷಕ, ಶ್ರೇಷ್ಠ ಚಿತ್ರಕಲಾ ಶಿಕ್ಷಕ ಹಾಗೂ ಶ್ರೇಷ್ಠ ಬೋಧಕೇತರ ಸಿಬ್ಬಂದಿ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು.
ಕಾರ್ಯಕ್ರಮದಲ್ಲಿ ನೂತನ ವಿದ್ಯಾಲಯ ಸಂಸ್ಥೆಯ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಡಗಂಚಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ರಾಜೀವ ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೂತನ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಾ. ಗೌತಮ ಆರ್. ಜಹಗೀರದಾರ ಅಧ್ಯಕ್ಷತೆ ವಹಿಸಿದ್ದರು.
ನೂತನ ವಿದ್ಯಾಲಯ ಸಂಸ್ಥೆಯ ಶೈಕ್ಷಣಿಕ ಮತ್ತು ಪ್ರಶಸ್ತಿ ಸಮಿತಿ ಅಧ್ಯಕ್ಷೆ ಡಾ. ಮೀನಾ ಪ ದೇಶಪಾಂಡೆ, ಸಂಸ್ಥೆಯ ಕಾರ್ಯದರ್ಶಿ ಅಭಿಜೀತ ಎ. ದೇಶಮುಖ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಶಿಕ್ಷಕರ ಸೇವೆ, ಶೈಕ್ಷಣಿಕ ಕೊಡುಗೆ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಅವರು ನೀಡುತ್ತಿರುವ ಅಮೂಲ್ಯ ಸೇವೆಯನ್ನು ಗುರುತಿಸಿ ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.