
ಸಂಜೆವಾಣಿ ವಾರ್ತೆ,
ವಿಜಯಪುರ, ಜು.೨೮: ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ವಿಠ್ಠಲ ಕಟಕದೊಂಡ, ತಾಲೂಕಿನಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದAತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಲಭ್ಯವಿರುವ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಮಾಹಿತಿ ಸಲ್ಲಿಸಬೇಕು. ಗ್ರಾಮೀಣ ನೀರು ಸರಬರಾಜು ಯೋಜನೆಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ನೀರಿನ ಕೊರತೆ ಉಂಟಾಗದAತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬAಧಿಸಿದ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಸಹಾಯಕ ನಿರ್ದೇಶಕ ಎಸ್.ಆರ್. ಕಟ್ಟಿ, ತಾಲೂಕು ಯೋಜನಾಧಿಕಾರಿ ಎಸ್.ಎಸ್. ಅಳ್ಳಗಿ, ಸಹಾಯಕ ಲೆಕ್ಕಾಧಿಕಾರಿ ಆರ್.ಜಿ. ಹುಲಗಬಾಳ, ವ್ಯವಸ್ಥಾಪಕ ವಿ. ಬಿಸನಾಳ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.































