Home ಮುಖಪುಟ ಸುದ್ದಿ ಖಾಸಗಿ ಬಸ್ ಪಲ್ಟಿ ಓರ್ವ ಸಾವು ೨೦ ಮಂದಿಗೆ ಗಾಯ

ಖಾಸಗಿ ಬಸ್ ಪಲ್ಟಿ ಓರ್ವ ಸಾವು ೨೦ ಮಂದಿಗೆ ಗಾಯ

ಹಾವೇರಿ,ಆ.೧೦-ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಉರುಳಿ ಬಿದ್ದು ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು,೨೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ನಡೆದಿದೆ.


ಬಾವರಸಿಂಗ್ ರಜಪೂತ(೧೮) ಮೃತಪಟ್ಟವರು.ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.


ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಾರ್ಗ ಮಧ್ಯದ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ


ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಪಲ್ಟಿಯಾಗಿದ್ದ ಖಾಸಗಿ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.


ಈ ಘಟನೆ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.