
ಬೀದರ:ಡಿ.9:ಸರಕಾರಿ ಪ್ರಥಮ ದರ್ಜೆ ಕಾಲೇಜು, ಮನ್ನಳ್ಳಿಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಸ್ಮರಿಸಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭವಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮನ್ನಳ್ಳಿ ಭಾರತೀಯ ಸ್ಟೇಟ್ ಬ್ಯಾಂಕನ್ ಶಾಖಾ ವ್ಯವಸ್ಥಾಪಕ ಶ್ರೀ ರಮೇಶ ಶಿಂದೆ ಮಾತನಾಡಿ, ಡಾ. ಬಾಬಾಸಾಹೇಬರ ಜೀವನ, ಹೋರಾಟ, ಸಂವಿಧಾನ ರಚನೆಗೆ ನೀಡಿದ ಅಪ್ರತಿಮ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಿಸಿದರು.
“ಅಂಬೇಡ್ಕರ್ ಅವರ ಜೀವನ ವಿಚಾರಗಳು ವಿದ್ಯಾರ್ಥಿಗಳಿಗೆ ಆದರ್ಶ ಮತ್ತು ಸ್ಫೂರ್ತಿದಾಯಕ. ಸಾಮಾಜಿಕ ನ್ಯಾಯಕ್ಕಾಗಿ ಅವರು ಮಾಡಿದ ಹೋರಾಟ ಶಾಶ್ವತ,” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶರಣಪ್ಪ ಜಿ ವಹಿಸಿದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು, ಶಿಕ್ಷಣ ಸುಧಾರಣೆಗಳ ಬಗ್ಗೆ ಪ್ರಸ್ತಾವನೆಯಲ್ಲಿ ವಿವರಿಸಿದರು.
ಡಾ. ನವರಂಗ, ಡಾ. ರಾಜಕುಮಾರ ಹಾಗೂ ಡಾ. ಜಯಶೀಲ ಅವರು ಕೂಡ ಮಾತನಾಡಿ,
ಅಂಬೇಡ್ಕರ್ ಅವರ ಚಿಂತನೆ, ಮಹಿಳಾ ಹಕ್ಕುಗಳ ಪರ ಹೋರಾಟ, ಹಾಗೂ ಸಂವಿಧಾನೀಕ ಮೌಲ್ಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸ್ವಾಗತ ಭಾಷಣವನ್ನು ಡಾ. ಮಮತಾ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿ-ವಿದ್ಯಾರ್ಥಿಗಳು ಭಾಗವಹಿಸಿದ್ದರು.























