Home ಜಿಲ್ಲೆ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರಿಂದ ಪ್ರಗತಿ ಪರಿಶೀಲನೆ

ಸಂಸದ ರಾಧಾಕೃಷ್ಣ ದೊಡ್ಡಮನಿ ಅವರಿಂದ ಪ್ರಗತಿ ಪರಿಶೀಲನೆ

ಕಲಬುರಗಿ,ಜು.17-ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರು ಇತ್ತೀಚಿಗೆ ಕಲಬುರಗಿಯ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಪ್ರಸ್ತಾಪಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಜೊತೆಗೆ ಜಿಲ್ಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಪುರಸ್ಕ್ರತ ಯೋಜನೆಗಳಡಿಯಲ್ಲಿ ಮಂಜೂರಾದ ಇತರ ಅಭಿವೃದ್ದಿ ಕಾಮಗಾರಿಗಳ ವಸ್ತುಸ್ಥಿತಿ ಬಗ್ಗೆ ಮಾಹಿತಿಯನ್ನು ಪಡೆದು, ಯಾವುದೇ ರೀತಿಯ ವಿಳಂಬಕ್ಕೆ ಆಸ್ಪದ ನೀಡದೇ ಸದರಿ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಸದರಿ ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್ ಹಾಗೂ ಸಿಇಓ ರಾಹುಲ್ ಸಂಕನೂರು ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ಮುಂದುವರೆದು ಸಂಸದರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ಸಲಹಾ ಸಮಿತಿಯ ಸದಸ್ಯರ ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯ ಪ್ರಯಾಣೀಕರ ಸುಗಮ ಪ್ರಯಾಣಕ್ಕೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ಅವಶ್ಯಕ ಕಾಮಗಾರಿಗಳ ಪಟ್ಟಿ ಮಾಡಿಕೊಡಲು ಸೂಚಿಸಿ, ಶೀಘ್ರದಲ್ಲಿ ಸಂಭಂದಪಟ್ಟ ಇಲಾಖೆಯಿಂದ ಕೆಲಸಗಳನ್ನು ತ್ವರಿತಗತಿ ನೆರವೇರಿಸಿಕೊಡುವ ನಿರ್ಣಯ ಕೈಗೊಂಡರು. ನಂತರ, ನಗರದಲ್ಲಿ ಪ್ರಗತಿಯಲ್ಲಿರುವ ಹಲವಾರು ಅಭಿವೃದ್ದಿ ಕಾಮಗಾರಿಗಳ ಸ್ಥಳ ತನಿಖೆಯನ್ನು ಕೈಗೊಂಡು ಖುದ್ದಾಗಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್ ಹಾಗೂ ಸಿಇಓ ರಾಹುಲ್ ಸಂಕನೂರು ಮತ್ತು ನಗರ ಪೆÇಲೀಸ್ ಕಮೀಷನರ್ ಡಾ. ಶರಣಪ್ಪ ಸೇರಿದಂತೆ ಹಲವಾರು ಅಧಿಕಾರಿಗಳು ಇದ್ದರು.