Home ಜಿಲ್ಲೆ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಭರವಸೆ

ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಭರವಸೆ

ಭಾಲ್ಕಿ:ಮಾ.1:ಪಟ್ಟಣದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿ ವತಿಯಿಂದ ಬರುವ ಏಪ್ರಿಲ್‌ನಲ್ಲಿ ನಡೆಯಲಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಶುಕ್ರವಾರ ಸಿಎಂ ಅವರನ್ನು ಭೇಟಿಯಾಗಿ ಆಹ್ವಾನ ಪತ್ರ ನೀಡಿ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.

ಗಡಿಯಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಕಳೆದ ನಾಲ್ಕೈದು ದಶಕಗಳಿಂದ ವಿಶಿಷ್ಟ ಕೊಡುಗೆ ನೀಡುತ್ತಿದ್ದಾರೆ.

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇಂತಹ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಅವರನ್ನು ಸಮಿತಿ ಅಧ್ಯಕ್ಷ ಖಂಡ್ರೆ ಮನವಿ ಮಾಡಿದರು.

ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಪೂಜ್ಯರ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸವುದಾಗಿ ಭರವಸೆ ನೀಡಿದ್ದಾರೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಎಂ.ಬಿ.ಪಾಟೀಲ್, ಶಾಸಕ ಬಿ.ಆರ್.ಪಾಟೀಲ್ ಹಾಜರಿದ್ದರು.