
ಆಳಂದ:ಜೂ.೩೦: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಎಸ್‌ಐಆರ್ ಕುರಿತು ವಿಸ್ತೃತವಾಗಿ ಮಾತನಾಡಿದ ಅವರು, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವುದು ಅಥವಾ ಮತದಾನದ ಹಕ್ಕಿನಿಂದ ವಂಚಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಪಕ್ಷಾತೀತ ರೀತಿಯಲ್ಲಿ ನಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಎಸ್‌ಐಆರ್ ಯಶಸ್ವಿ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎಗಳು), ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಈ ಪ್ರಕ್ರಿಯೆಯ ಮೂಲ ಉದ್ದೇಶ ಅರ್ಹ ಮತದಾರರೊಬ್ಬರೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ ಎಂದು ತಿಳಿಸಿದರು.
ಇಂದು ಸಾವಿರಾರು ಜನರು ಉದ್ಯೋಗ, ಶಿಕ್ಷಣ ಮತ್ತು ಜೀವನೋಪಾಯಕ್ಕಾಗಿ ಬೆಂಗಳೂರು, ಮುಂಬೈ, ಪುಣೆ, ಹೈದರಾಬಾದ್ ಸೇರಿದಂತೆ ವಿವಿಧ ಮಹಾನಗರಗಳಿಗೆ ವಲಸೆ ಹೋಗಿದ್ದಾರೆ. ಅವರು ತಾತ್ಕಾಲಿಕವಾಗಿ ಹೊರರಾಜ್ಯ ಅಥವಾ ಹೊರಜಿಲ್ಲೆಗಳಲ್ಲಿ ನೆಲೆಸಿದ್ದರೂ ಅವರ ಮತದಾನದ ಹಕ್ಕು ಅಬಾಧಿತವಾಗಿರಬೇಕು. ಕುಟುಂಬದ ಸದಸ್ಯರು ಅಗತ್ಯ ದಾಖಲೆಗಳು ಹಾಗೂ ಮಾಹಿತಿ ಒದಗಿಸಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಮುಂದುವರಿಯುವAತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ವಲಸೆ ಹೋದವರು, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು ಸೇರಿದಂತೆ ಯಾವುದೇ ವರ್ಗದ ಮತದಾರರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ, ಪಕ್ಷಪಾತ ಅಥವಾ ತಾಂತ್ರಿಕ ಕಾರಣಗಳಿಂದ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.
ಪ್ರಜಾಪ್ರಭುತ್ವದ ಶಕ್ತಿ ಮತದಾರನಲ್ಲಿದೆ. ಮತದಾರರ ಪಟ್ಟಿಯೇ ಚುನಾವಣಾ ವ್ಯವಸ್ಥೆಯ ಜೀವಾಳವಾಗಿದೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಯಾವುದೇ ಲೋಪ ಕಂಡುಬAದರೆ ಕೂಡಲೇ ಸಂಬAಧಿತ ಅಧಿಕಾರಿಗಳನ್ನು ಸಂಪರ್ಕಿಸಿ ತಿದ್ದುಪಡಿ ಮಾಡಿಸಿಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಎಸ್‌ಐಆರ್ ಕುರಿತು ಜನಜಾಗೃತಿ ಮೂಡಿಸುವ ಕೆಲಸ ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಚುನಾವಣಾ ಆಯೋಗವು ಎಲ್ಲ ರಾಜಕೀಯ ಪಕ್ಷಗಳ ವಿಶ್ವಾಸ ಗಳಿಸುವ ರೀತಿಯಲ್ಲಿ ಪಾರದರ್ಶಕ ಹಾಗೂ ಕಾನೂನುಬದ್ಧವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸಬೇಕು. ಚುನಾವಣಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕು ರಕ್ಷಿಸುವುದು ಅತ್ಯಗತ್ಯ ಎಂದು ಹೇಳಿದರು.
ಕೆಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬAಧಿಸಿದAತೆ ರಾಜಕೀಯ ಚರ್ಚೆಗಳು ನಡೆದಿರುವುದನ್ನು ಉಲ್ಲೇಖಿಸಿದ ಅವರು, “ಎಸ್‌ಐಆರ್‌ನ ಪರಿಣಾಮದಿಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ರಾಜಕೀಯ ಹಿನ್ನಡೆಯಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದ್ದರಿಂದ ಕರ್ನಾಟಕದಲ್ಲಿ ಅಂತಹ ಯಾವುದೇ ಗೊಂದಲ ಉಂಟಾಗದAತೆ ಸರ್ಕಾರ, ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಂಚಗ್ಯಾರAಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ ಮುನ್ನೋಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಶರಣು ಭೂಸನೂರ, ಕಾಂಗ್ರೆಸ್ ಮುಖಂಡ ಸುಭಾಷ ಮುರುಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.































