ತುಮಕೂರು, ಜೂ. ೧೪- ತುಮಕೂರು ಉಪವಿಭಾಗದಲ್ಲಿ NCPCR pan India child labour rescue and rehabilitation campaign ಅಡಿಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ಸದಸ್ಯರುಗಳೊಂದಿಗೆ ನಡೆಸಿದ ದಾಳಿಯಲ್ಲಿ ನಗರದ ಗುಬ್ಬಿ ಗೇಟ್ ರಿಂಗ್ ರಸ್ತೆಯ ಗ್ಯಾರೇಜ್‌ಗಳಲ್ಲಿ ಮಹಮ್ಮದ್ ಮಾಸ್ ಮತ್ತು ನಿರಜ್ ಕುಮಾರ್ ಬೋಟಿ ಎಂಬ ಕಿಶೋರ ಕಾರ್ಮಿಕರನ್ನು ರಕ್ಷಿಸಿ ಬಾಲ ಮಂದಿರಕ್ಕೆ ಸೇರಿಸಲಾಯಿತು.
ಈ ದಾಳಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್, ಕಾರ್ಮಿಕ ಅಧಿಕಾರಿ ಕೆ. ತೇಜಾವತಿ ಹಾಗೂ ಸೆಕ್ಷನ್ ೧೭ ಅಧಿಕಾರಿಗಳು ಪಾಲ್ಗೊಂಡಿದ್ದರು.